ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ದುರ್ಬಳಕೆ ಮಾಡಲು ಯತ್ನಿಸಿದ ಮಹಿಳೆ | ಮಹಿಳೆಯ ಕೃತ್ಯಕ್ಕೆ ಬೆಚ್ಚಿಬಿದ್ದ ಪೋಷಕರು - Mahanayaka
3:45 PM Thursday 12 - September 2024

ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ದುರ್ಬಳಕೆ ಮಾಡಲು ಯತ್ನಿಸಿದ ಮಹಿಳೆ | ಮಹಿಳೆಯ ಕೃತ್ಯಕ್ಕೆ ಬೆಚ್ಚಿಬಿದ್ದ ಪೋಷಕರು

25/12/2020

ಲಕ್ನೋ:  ಬಾಲಕಿಯನ್ನು ವೇಶ್ಯಾವಾಟಿಕೆಗೆ ದೂಡಲು ಯತ್ನಿಸಿದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದು, ಬಿಹಾರದ ಬಾಲಕಿಯನ್ನು ವೇಶ್ಯಾವಾಟಿಕೆಗಾಗಿ  ಉತ್ತರಪ್ರದೇಶಕ್ಕೆ ಕೊಂಡೊಯ್ಯಲು ಈ ಮಹಿಳೆ ಪ್ರಯತ್ನಿಸಿದ್ದಳು ಎಂದು ಆರೋಪಿಸಲಾಗಿದೆ.

ಬಿಹಾರದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಆಕೆ ಸಂಬಂಧಿಯೇ ಆಗಿರುವ ಮಹಿಳೆ ಗುಲ್ಶನ್ ಬಾನೊ ಎಂಬಾಕೆ ಬಿಹಾರದಿಂದ ಉತ್ತರಪ್ರದೇಶಕ್ಕೆ ವೇಶ್ಯಾವಾಟಿಕೆ ನಡೆಸಲು ಬಲವಂತವಾಗಿ ಹೊತ್ತೊಯ್ದಿದ್ದಳು. ಈ ಮಾಹಿತಿ ತಿಳಿಯುತ್ತಿದ್ದಂತೆಯೇ ಪೋಷಕರು  ಮಕ್ಕಳ ಕಲ್ಯಾಣ ಸಮಿತಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಪೋಷಕರು ದೂರು ನೀಡಿದ ಬಳಿಕ ಈ ಘಟನೆ ಬೆಳಕಿಗೆ ಬಂದಿದೆ. ಬಾಲಕಿಯನ್ನು ಉತ್ತರ ಪ್ರದೇಶದ ಬಾಲಿಯಾ ಜಿಲ್ಲೆಗೆ ಸಾಗಿಸಲಾಗಿದೆ ಎಂಬ ಮಾಹಿತಿ ತಿಳಿದ ಪೊಲೀಸರು ತಕ್ಷಣವೇ  ಕಾರ್ಯಾಚರಣೆ ನಡೆಸಿದ್ದು, ಬಾಲಕಿಯನ್ನು ರಕ್ಷಿಸಿದ್ದು, ಮಹಿಳೆಯನ್ನು ಬಂಧಿಸಿದ್ದಾರೆ. ಸದ್ಯ ಬಾಲಕಿಯನ್ನು ಮಕ್ಕಳ ಕಲ್ಯಾಣ ಸಮಿತಿ ಆರೈಕೆಯಲ್ಲಿಡಲಾಗಿದೆ.


Provided by

ಇತ್ತೀಚಿನ ಸುದ್ದಿ