6:26 PM Thursday 15 - January 2026

ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ದುರ್ಬಳಕೆ ಮಾಡಲು ಯತ್ನಿಸಿದ ಮಹಿಳೆ | ಮಹಿಳೆಯ ಕೃತ್ಯಕ್ಕೆ ಬೆಚ್ಚಿಬಿದ್ದ ಪೋಷಕರು

25/12/2020

ಲಕ್ನೋ:  ಬಾಲಕಿಯನ್ನು ವೇಶ್ಯಾವಾಟಿಕೆಗೆ ದೂಡಲು ಯತ್ನಿಸಿದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದು, ಬಿಹಾರದ ಬಾಲಕಿಯನ್ನು ವೇಶ್ಯಾವಾಟಿಕೆಗಾಗಿ  ಉತ್ತರಪ್ರದೇಶಕ್ಕೆ ಕೊಂಡೊಯ್ಯಲು ಈ ಮಹಿಳೆ ಪ್ರಯತ್ನಿಸಿದ್ದಳು ಎಂದು ಆರೋಪಿಸಲಾಗಿದೆ.

ಬಿಹಾರದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಆಕೆ ಸಂಬಂಧಿಯೇ ಆಗಿರುವ ಮಹಿಳೆ ಗುಲ್ಶನ್ ಬಾನೊ ಎಂಬಾಕೆ ಬಿಹಾರದಿಂದ ಉತ್ತರಪ್ರದೇಶಕ್ಕೆ ವೇಶ್ಯಾವಾಟಿಕೆ ನಡೆಸಲು ಬಲವಂತವಾಗಿ ಹೊತ್ತೊಯ್ದಿದ್ದಳು. ಈ ಮಾಹಿತಿ ತಿಳಿಯುತ್ತಿದ್ದಂತೆಯೇ ಪೋಷಕರು  ಮಕ್ಕಳ ಕಲ್ಯಾಣ ಸಮಿತಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಪೋಷಕರು ದೂರು ನೀಡಿದ ಬಳಿಕ ಈ ಘಟನೆ ಬೆಳಕಿಗೆ ಬಂದಿದೆ. ಬಾಲಕಿಯನ್ನು ಉತ್ತರ ಪ್ರದೇಶದ ಬಾಲಿಯಾ ಜಿಲ್ಲೆಗೆ ಸಾಗಿಸಲಾಗಿದೆ ಎಂಬ ಮಾಹಿತಿ ತಿಳಿದ ಪೊಲೀಸರು ತಕ್ಷಣವೇ  ಕಾರ್ಯಾಚರಣೆ ನಡೆಸಿದ್ದು, ಬಾಲಕಿಯನ್ನು ರಕ್ಷಿಸಿದ್ದು, ಮಹಿಳೆಯನ್ನು ಬಂಧಿಸಿದ್ದಾರೆ. ಸದ್ಯ ಬಾಲಕಿಯನ್ನು ಮಕ್ಕಳ ಕಲ್ಯಾಣ ಸಮಿತಿ ಆರೈಕೆಯಲ್ಲಿಡಲಾಗಿದೆ.

ಇತ್ತೀಚಿನ ಸುದ್ದಿ

Exit mobile version