9 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ: ಬಾಲಕಿಯ ಸ್ಥಿತಿ ಗಂಭೀರ
ಇಂದೋರ್: ಮಧ್ಯಪ್ರದೇಶದ ಇಂದೋರ್ ನಗರದಲ್ಲಿ 9 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ನಡೆಸಿದ ಘಟನೆ ನಡೆದಿದ್ದು, ಸಂತ್ರಸ್ತ ಬಾಲಕಿಯ ಸ್ಥಿತಿ ಚಿಂತಾಜನಕವಾಗಿದೆ.
ರಾಜೇಂದ್ರ ನಗರ ಪ್ರದೇಶದ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಬಾಲಕಿಯ ತಂದೆ ಭದ್ರತಾ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಸಮೀಪದ ಗುಡಿಸಲಿನಲ್ಲಿ ವಾಸವಾಗಿದ್ದರು. 32 ವರ್ಷದ ಆರೋಪಿಯು ಅಲ್ಲಿಂದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ್ದಾನೆ.
ಬಾಲಕಿ ಅಳುತ್ತಿರುವ ಶಬ್ಧವನ್ನು ಕೇಳಿ ಸ್ಥಳಕ್ಕೆ ಪೋಷಕರು ಧಾವಿಸಿದ್ದು, ಬಳಿಕ ಚಿಂತಾಜನಕ ಸ್ಥಿತಿಯಲ್ಲಿದ್ದ ಆಕೆಯನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಪೊಲೀಸರು ಸಿಸಿ ಕ್ಯಾಮರಾಗಳ ದೃಶ್ಯಗಳನ್ನು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka