8:16 PM Wednesday 15 - October 2025

ಅಪ್ರಾಪ್ತ ಬಾಲಕಿಯ ಮೊಬೈಲ್ ಗೆ ಅಶ್ಲೀಲ ಚಿತ್ರ ಕಳುಹಿಸಿದ ಮಹಿಳೆ | ಮಹಿಳೆಯ ವಿಲಕ್ಷಣ ಮನಸ್ಥಿತಿಗೆ ಬೆಚ್ಚಿಬಿದ್ದ ಪೋಷಕರು

mobile video
22/08/2021

ಭೋಪಾಲ್: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೊಬೈಲ್ ಗೆ ಮಹಿಳೆಯೊಬ್ಬಳು ಅಶ್ಲೀಲ ಚಿತ್ರವನ್ನು ಕಳುಹಿಸಿದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದ್ದು, ಘಟನೆ ಸಂಬಂಧ  ಆರೋಪಿ ಮಹಿಳೆಯ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಆರೋಪಿ ಮಹಿಳೆ ಹಾಗೂ ಬಾಲಕಿಯ ತಂದೆಯ ನಡುವೆ ವ್ಯವಹಾರಕ್ಕೆ ಸಂಬಂಧಿಸಿದ ವಿವಾದವಿದ್ದು, ಇವರ ನಡುವೆ ಕಲಹ ಉಂಟಾಗಿತ್ತು ಎನ್ನಲಾಗಿದೆ. ಇದಕ್ಕೆ ಪ್ರತಿಕಾರ ತೀರಿಸಿಕೊಳ್ಳಲು ಆತನ 11 ವರ್ಷ ವಯಸ್ಸಿನ ಬಾಲಕಿಯ ಮೊಬೈಲ್ ಗೆ ಅಶ್ಲೀಲ ಚಿತ್ರಗಳನ್ನು ಕಳುಹಿಸಿ ಮಾನಸಿಕ ಹಿಂದೆ ನೀಡಿದ್ದಾಳೆ ಎಂದು ಬಾಲಕಿಯ ಪೋಷಕರು ನೀಡಿರುವ ದೂರಿನಲ್ಲಿ ಆರೋಪಿಸಲಾಗಿದೆ.

ಬಾಲಕಿಯ ಮೊಬೈಲ್ ಗೆ ಅಶ್ಲೀಲ ವಿಡಿಯೋ ಕಳುಹಿಸಲಾಗುತ್ತಿದೆ ಎನ್ನುವುದು ತಿಳಿಯುತ್ತಿದ್ದಂತೆಯೇ ಪೋಷಕರು ಮಹಿಳೆಗೆ ಎಚ್ಚರಿಕೆ ನೀಡಿದ್ದರು. ಈ ರೀತಿಯ ವಿಡಿಯೋಗಳನ್ನು ಕಳುಹಿಸುವುದನ್ನು ನಿಲ್ಲಿಸು ಎಂದು ಹೇಳಿದರೂ ಆಕೆ ಅದನ್ನು ಮುಂದುವರಿಸಿದ್ದಳು ಎಂದು ಪೋಷಕರು ಆರೋಪಿಸಿದ್ದಾರೆ.

ಪೋಷಕರ ದೂರಿನನ್ವಯ ಆರೋಪಿ ಮಹಿಳೆಯ ವಿರುದ್ಧ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.  ಜೊತೆಗೆ ಐಟಿ ಆ್ಯಕ್ಟ್ ಅಡಿಯಲ್ಲಿಯೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸದ್ಯ ಮಹಿಳೆ ತಲೆ ಮರೆಸಿಕೊಂಡಿದ್ದು, ಆಕೆ ಭೋಪಾಲ್ ನಲ್ಲಿ ಅಡಗಿದ್ದಾಳೆ ಎನ್ನುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಶೀಘ್ರವೇ ಆಕೆಯ ಬಂಧನವಾಗುವ ಸಾಧ್ಯತೆ ಇದೆ.

ಇನ್ನಷ್ಟು ಸುದ್ದಿಗಳು…

ನಾಳೆಯಿಂದ ಶಾಲಾ ಕಾಲೇಜು ಆರಂಭ | ಕೊವಿಡ್ ಗೆ ಸೆಡ್ಡು ಹೊಡೆಯಲು ಸರ್ಕಾರದ ನಡೆಸಿರುವ ಸಿದ್ಧತೆ ಹೇಗಿದೆ ಗೊತ್ತಾ?

ಆಗಸ್ಟ್ 23ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ರಾಜಕೀಯ ಚಿಂತನೆ- ಪರ್ಯಾಯ ರಾಜಕಾರಣದ ಕುರಿತು ಒಂದು ಸಂವಾದ ಕಾರ್ಯಕ್ರಮ

ಕೊವಿಡ್ ಮಾರ್ಗಸೂಚಿಗೆ ಅಂಜದೇ ಗಣೇಶೋತ್ಸವ ನಡೆಸಲು ಶಾಸಕ ಯತ್ನಾಳ್ ಕರೆ!

ವಿಡಿಯೋ ಮುಂದಿಟ್ಟುಕೊಂಡು ಬಿಜೆಪಿ ಮುಖಂಡ ಚಿ.ನಾ.ರಾಮು ವಿರುದ್ಧ ಮಹಿಳೆಯಿಂದ ಬ್ಲ್ಯಾಕ್ ಮೇಲ್ | ದೂರು ದಾಖಲು

ಕೊಲೆ ಆರೋಪಿ ವಿನಯ್ ಕುಲಕರ್ಣಿ ಜಾಮೀನಿನಲ್ಲಿ ಬಿಡುಗಡೆ | ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ

ಜಿಮ್ ನಲ್ಲಿ ಜೊತೆಯಾಗಿ ವರ್ಕೌಟ್ ಮಾಡಿದ ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ!

ಬೆಂಗಳೂರು-ಮೈಸೂರು 6 ಪಥದ ರಸ್ತೆ ನಿರ್ಮಾಣ ಪ್ರತಾಪ್ ಸಿಂಹ ಸಾಧನೆಯಲ್ಲ | ಹೆಚ್.ವಿಶ್ವನಾಥ್

ಇತ್ತೀಚಿನ ಸುದ್ದಿ

Exit mobile version