21 ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ್ದ ಪತ್ರಕರ್ತನಿಗೆ 10 ವರ್ಷ ಜೈಲು: ದಾರಿ ತೋರಿಸುವ ನೆಪದಲ್ಲಿ ಕಾಡಿಗೆ ಕರೆದೊಯ್ದು ದೌರ್ಜನ್ಯ
ಉಡುಪಿ: ನಾಲ್ಕು ವರ್ಷಗಳ ಹಿಂದೆ 21 ಶಾಲಾ ಬಾಲಕರಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪೋಕ್ಸೊ ಪ್ರಕರಣಗಳ ಆರೋಪಿ ಕುಂದಾಪುರದ ಪತ್ರಕರ್ತ ಚಂದ್ರ ಕೆ.ಹೆಮ್ಮಾಡಿ(40)ಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯವು ಮತ್ತೆ ಎರಡು ಪ್ರಕರಣಗಳಲ್ಲಿ 10 ವರ್ಷ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ ತೀರ್ಪು ನೀಡಿದೆ.
ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2018ರ ಜೂನ್ ತಿಂಗಳಲ್ಲಿ 14 ವರ್ಷ ಪ್ರಾಯದ ಬಾಲಕನನ್ನು ಚಂದ್ರ ಹೆಮ್ಮಾಡಿ, ಜಲಪಾತದ ಫೋಟೋ ತೆಗೆಯಲು ಇದೆ ಎಂದು ಹೇಳಿ ಕಾಡಿಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದನು. ಈ ಆರೋಪದಲ್ಲಿ ಚಂದ್ರ ಹೆಮ್ಮಾಡಿಯನ್ನು ಬೈಂದೂರು ಪೊಲೀಸರು 2018ರ ನ.28ರಂದು ಬಂಧಿಸಿದ್ದರು. ಆಗಿನ ಬೈಂದೂರು ಪೊಲೀಸ್ ನಿರೀಕ್ಷಕ ಪರಮೇಶ್ವರ್ ಆರ್. ಗುನಗ ನ್ಯಾಯಾಲಯಕ್ಕೆ ದೋಷರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ಒಟ್ಟು 21 ಸಾಕ್ಷಿಗಳ ಪೈಕಿ 14 ಸಾಕ್ಷಿಗಳ ವಿಚಾರಣೆ ನಡೆಸಲಾಗಿದ್ದು, ನೊಂದ ಬಾಲಕರು ಮತ್ತು ಸಾಂದರ್ಭಿಕ ಸಾಕ್ಷಗಳ ಆಧಾರದಲ್ಲಿ ಆರೋಪಿಗೆ ನ್ಯಾಯಾಧೀಶ ಶ್ರೀನಿವಾಸ ಸುವರ್ಣ 10ವರ್ಷಗಳ ಜೈಲು ಶಿಕ್ಷೆ ಮತ್ತು ಒಂದು ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದರು.
ಇನ್ನೊಂದು ಪ್ರಕರಣದಲ್ಲಿ ಲೈಂಗಿಕ ಕಿರುಕುಳ ನೀಡಿರುವುದಕ್ಕೆ ಮೂರು ವರ್ಷ ಕಠಿಣ ಶಿಕ್ಷೆ ಮತ್ತು ಒಂದು ಸಾವಿರ ರೂ. ದಂಡ ವಿಧಿಸಲಾಗಿದೆ. ಪ್ರಾಸಿಕ್ಯೂಶನ್ ಪರವಾಗಿ ಉಡುಪಿ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ವಾದಿಸಿದ್ದರು.
ಸುದ್ದಿ ಸಂಬಂಧ ದಾರಿ ತೋರಿಸುವ ನೆಪದಲ್ಲಿ ಶಾಲಾ ವಿದ್ಯಾರ್ಥಿಗಳನ್ನು ಕಾಡಿಗೆ ಕರೆದುಕೊಂಡು ಹೋಗುತ್ತಿದ್ದ ಚಂದ್ರ ಹೆಮ್ಮಾಡಿ, ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದನು. ಒಟ್ಟು 21 ಬಾಲಕರು ನೀಡಿದ ದೂರಿನಂತೆ ಆರೋಪಿ ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ 16, ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಮೂರು ಹಾಗೂ ಕುಂದಾಪುರ ಗ್ರಾಮಾಂತರ ಮತ್ತು ಕೊಲ್ಲೂರು ಪೊಲೀಸ್ ಠಾಣೆಗಳಲ್ಲಿ ತಲಾ ಒಂದು ಪ್ರಕರಣಗಳು ಪೋಕ್ಸೊ ಕಾಯಿದೆಯಡಿ ದಾಖಲಾಗಿದ್ದವು.
ಆರೋಪಿ ಚಂದ್ರ ಹೆಮ್ಮಾಡಿ ವಿರುದ್ಧ ದಾಖಲಾದ ಒಟ್ಟು 21 ಪೋಕ್ಸೊ ಪ್ರಕರಣಗಳಲ್ಲಿ ಈವರೆಗೆ 11 ಪ್ರಕರಣಗಳಲ್ಲಿ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಎಂಟು ಪ್ರಕರಣಗಳಲ್ಲಿ ಆರೋಪಿ ಸಾಕ್ಷಗಳ ಕೊರತೆಯಿಂದ ಖುಲಾಸೆಗೊಂಡಿ ದ್ದಾನೆ. ಉಳಿದ ಎರಡು ಪ್ರಕರಣಗಳ ತೀರ್ಪನ್ನು ಕೋರ್ಟ್ ನಾಳೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka




























