ರಾಜಸ್ಥಾನದ ಮುಖ್ಯಮಂತ್ರಿಯಾಗಿ ಬಾಲಕ್ ನಾಥ್ ಯೋಗಿ..? ಇಬ್ಬರು ಉಪಮುಖ್ಯಮಂತ್ರಿ ಇರ್ತಾರ..? ಇಲ್ಲಿದೆ ಫ್ಯಾಕ್ಟ್ ಚೆಕ್..! - Mahanayaka

ರಾಜಸ್ಥಾನದ ಮುಖ್ಯಮಂತ್ರಿಯಾಗಿ ಬಾಲಕ್ ನಾಥ್ ಯೋಗಿ..? ಇಬ್ಬರು ಉಪಮುಖ್ಯಮಂತ್ರಿ ಇರ್ತಾರ..? ಇಲ್ಲಿದೆ ಫ್ಯಾಕ್ಟ್ ಚೆಕ್..!

06/12/2023

ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್ ಗಢ ರಾಜ್ಯಗಳ ಮುಖ್ಯಮಂತ್ರಿಗಳ ಬಗ್ಗೆ ಚರ್ಚಿಸಲು ಬಿಜೆಪಿ ವರಿಷ್ಠರು ಇಂದು ಸಭೆ ನಡೆಸಿದರು. ಒಂದು ದಿನದ ಹಿಂದೆ ಕಾಂಗ್ರೆಸ್ ಸಂಸದ ಅಧೀರ್ ಚೌಧರಿ ಅವರು ಲೋಕಸಭಾ ಸಂಸದ ಬಾಲಕ್‌ನಾಥ್ ಯೋಗಿ ಅವರೇ ರಾಜಸ್ಥಾನದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ತಮಾಷೆ ಮಾಡಿದ್ದರು.


Provided by

ಹೀಗಾಗಿ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ತಿಜಾರಾ ವಿಧಾನಸಭಾ ಕ್ಷೇತ್ರದಿಂದ ಗೆದ್ದ ಬಾಲಕ್ ನಾಥ್ ಯೋಗಿ ಅವರಿಗೆ ಮುಖ್ಯಮಂತ್ರಿಯಾಗುವ ಅವಕಾಶ ಸಿಗಬಹುದು ಎಂಬ ಊಹಾಪೋಹಗಳು ಹೆಚ್ಚಾಗಿತ್ತು.
ಈಗ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರ ಸಹಿಯೊಂದಿಗೆ ಒಂದು ಹೇಳಿಕೆ ವೈರಲ್ ಆಗುತ್ತಿದೆ.

ಬಾಲಕ್‌ನಾಥ್ ಯೋಗಿ ರಾಜಸ್ಥಾನದ ಮುಖ್ಯಮಂತ್ರಿಯಾದ್ರೆ ಕಿರೋಡಿ ಲಾಲ್ ಮೀನಾ ಮತ್ತು ದಿಯಾ ಕುಮಾರಿ ಅವರ ಡಿಸಿಎಂ ಆಗಲಿದ್ದಾರೆ ಎಂದು ಉಲ್ಲೇಖಿಸಲಾಗಿದೆ.
ಈ ಕುರಿತು ಸ್ಪಷ್ಟನೆ ನೀಡಿರುವ ರಾಜಸ್ಥಾನದ ಬಿಜೆಪಿಯು ತಮ್ಮ ಎಕ್ಸ್ ನಲ್ಲಿ ಈ ಹೇಳಿಕೆ ನಕಲಿ ಎಂದು ಹೇಳಿದೆ.

ಬಿಜೆಪಿ ಶಾಸಕಿ ದಿಯಾ ಕುಮಾರಿ ಅವರು ಇಂದು ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿದರು. ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಕಾರಣ ಬಾಲಕ್‌ನಾಥ್ ಯೋಗಿ ಈಗಾಗಲೇ ದೆಹಲಿಯಲ್ಲಿದ್ದಾರೆ. ವಸುಂಧರಾ ರಾಜೇ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡದಿದ್ದರೆ ಬಿಜೆಪಿಗೆ ಹಾನಿ ಉಂಟಾಗಬಹುದು ಎಂದು ಊಹಿಸಲಾಗಿದೆ.
ರಾಜಸ್ಥಾನಕ್ಕೆ ಬಿಜೆಪಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಇನ್ನೂ ಘೋಷಿಸಿಲ್ಲ. ದಿಯಾ ಕುಮಾರಿ, ವಸುಂಧರಾ ರಾಜೇ, ಬಾಲಕ್ ನಾಥ್ ಮತ್ತು ರಾಜ್ಯವರ್ಧನ್ ಸಿಂಗ್ ರಾಥೋಡ್ ಪ್ರಮುಖ ಸ್ಪರ್ಧಿಗಳಾಗಿದ್ದಾರೆ.

ರಾಜಸ್ಥಾನದಲ್ಲಿ ಮತ ಎಣಿಕೆಯು ಕೆಲವು ಸಮೀಕ್ಷೆಗಳು ಊಹಿಸಿದ್ದಕ್ಕಿಂತ ಸಂಪೂರ್ಣವಾಗಿ ಭಿನ್ನವಾದ ಚಿತ್ರಣವನ್ನು ನೀಡಿತು. ಬಿಜೆಪಿ 115 ಸ್ಥಾನಗಳನ್ನು ಗೆಲ್ಲುವ ಮೂಲಕ ಸರ್ಕಾರ ರಚಿಸಲು ಸಜ್ಜಾಗಿದೆ. ಕಾಂಗ್ರೆಸ್ 69 ಸ್ಥಾನ ಮಾತ್ರ ಗೆದ್ದಿತ್ತು. ರಾಜಸ್ಥಾನದ 200 ವಿಧಾನಸಭಾ ಸ್ಥಾನಗಳಲ್ಲಿ 199 ಸ್ಥಾನಗಳಿಗೆ ನವೆಂಬರ್ 25 ರಂದು ಚುನಾವಣೆ ನಡೆದಿತ್ತು.

ಇತ್ತೀಚಿನ ಸುದ್ದಿ