ಬಲಪಂಥೀಯರು ಟೀಕಿಸುತ್ತಿದ್ದಾರೆ ಎಂದರೆ, ನಾವು ಸರಿಯಾದ ಮಾರ್ಗದಲ್ಲಿದ್ದೇವೆ ಎಂದರ್ಥ: ಎಂ.ಕೆ.ಸ್ಟಾಲಿನ್
ಚೆನ್ನೈ: ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಗಾಮಿ ಬಲಪಂಥೀಯರು ನಮ್ಮ ಮೇಲೆ ಮುಗಿಬಿದ್ದಿದ್ದಾರೆ ಎಂದರೆ ನಮ್ಮ ಸರ್ಕಾರ ಸರಿಯಾದ ಪಥದಲ್ಲಿದೆ ಎಂಬುದರ ಮರುದೃಢೀಕರಣ ಎಂದು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ.
ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಹೇಳಿಕೆ ನೀಡಿದ ಅವರು, ಬಲಪಂಥೀಯರು ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದರೆ, ನಮ್ಮ ಸರ್ಕಾರ ಸರಿಯಾದ ಕೆಲಸ ಮಾಡುತ್ತಿದೆ ಮತ್ತು ತಮಿಳುನಾಡು ನೇರವಾದ ಪಥದಲ್ಲಿದೆ ಎಂದರ್ಥ ಎಂದು ಅಭಿಪ್ರಾಯಪಟ್ಟರು.
ಬಲಪಂಥೀಯರು ವಿಚಾರಗಳನ್ನು ತಿರುಚುವ ಮತ್ತು ಸುಳ್ಳು ಸುದ್ದಿಗಳನ್ನು ಹಬ್ಬಿಸುವ ಕುತಂತ್ರಿಗಳು. ಅವರು ಹಿಂದಿ ಹೇರಿಕೆ ಮೂಲಕ ಮತ್ತು ಜಾತ್ಯತೀತ ವ್ಯವಸ್ಥೆಯನ್ನು ಹತ್ತಿಕ್ಕುವ ಮೂಲಕ ತಮಿಳಿಗರ ಹಿತಾಸಕ್ತಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.
ಡಿಎಂಕೆ ಸ್ಥಾಪಕ ಸಿ.ಎನ್.ಅಣ್ಣಾದುರೈ ಅವರು ಸಂಸತ್ತಿನಲ್ಲಿ ‘ನಾನು ದ್ರಾವಿಡ ವಂಶಕ್ಕೆ ಸೇರಿದವನು’ ಎಂದು ಗುಡುಗಿದ್ದಾರೆ. ನಾವೂ ಅದನ್ನೇ ಅನುಸರಿಸುತ್ತೇವೆ. ನಮ್ಮ ದ್ರಾವಿಡ ಮಾದರಿ ಸರ್ಕಾರವು ‘ಒಂದು ಜಾತಿ; ಒಂದು ದೇವರು’ ಎಂದಿರುವ ಅಣ್ಣಾ ಅವರ ಹೆಜ್ಜೆಗಳನ್ನು ಹಿಂಬಾಲಿಸಿ ನಡೆಯುತ್ತಿದೆ ಎಂದಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

























