11:33 AM Saturday 31 - January 2026

ಬಲಿಷ್ಠ ಪ್ರಜಾಪ್ರಭುತ್ವ ವ್ಯವಸ್ಥೆಗೆ ನಮ್ಮ ಶ್ರೇಷ್ಠ ಸಂವಿಧಾನವೇ ಆಧಾರ | ಸಿಎಂ ಯಡಿಯೂರಪ್ಪ

26/01/2021

ಬೆಂಗಳೂರು: “ಬಲಿಷ್ಠ ಪ್ರಜಾಪ್ರಭುತ್ವ ವ್ಯವಸ್ಥೆಗೆ ನಮ್ಮ ಶ್ರೇಷ್ಠ ಸಂವಿಧಾನವೇ ಆಧಾರ” ಎಂದು ಮುಖ್ಯಮಂತ್ರಿ ಯಡಿಯೂರಪ್ಪ 72ನೇ ಗಣರಾಜ್ಯೋತ್ಸವ(ಸಂವಿಧಾನ ದಿನಾಚರಣೆ) ಪ್ರಯುಕ್ತ ಟ್ವೀಟ್ ಮಾಡಿದ್ದಾರೆ.

ನಾಡಿನ ಸಮಸ್ತ ಜನತೆಗೆ 72ನೇ ಗಣರಾಜ್ಯೋತ್ಸವ ದಿನದ ಹಾರ್ದಿಕ ಶುಭಾಶಯಗಳು. ನಮ್ಮ ಬಲಿಷ್ಠ ಪ್ರಜಾಪ್ರಭುತ್ವ ವ್ಯವಸ್ಥೆಗೆ ನಮ್ಮ ಶ್ರೇಷ್ಠ ಸಂವಿಧಾನವೇ ಆಧಾರ. ಸಂವಿಧಾನದ ಸದಾಶಯಗಳನ್ನು ಪಾಲಿಸುವ ಜೊತೆಗೆ ಭಾರತದ ಏಕತೆ, ವೈವಿಧ್ಯತೆ, ಅನನ್ಯತೆಗಳನ್ನು ಎತ್ತಿಹಿಡಿಯೋಣ ಎಂದು ಸಿಎಂ ಹೇಳಿದ್ದಾರೆ.

72ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಸಕಲ ತಯಾರಿಗಳನ್ನೂ ಮಾಡಿಕೊಳ್ಳಲಾಗಿದೆ. ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಇಂದು ರೈತರಿಂದ ಪ್ರತಿಭಟನೆ ಕೂಡ ಇರುವುದರಿಂದ ಬಿಗಿ ಬಂದೋಬಸ್ತ್ ವಹಿಸಲಾಗಿದೆ.

ಇತ್ತೀಚಿನ ಸುದ್ದಿ

Exit mobile version