ಬೆಂಗಳೂರಿನಲ್ಲಿ ಬೀದಿಬದಿಗಳನ್ನು ಹಣ್ಣುಗಳನ್ನು ಕತ್ತರಿಸಿ ಮಾರಾಟ ಮಾಡುವುದಕ್ಕೆ ನಿರ್ಬಂಧ

ಬೆಂಗಳೂರು: ಬೆಂಗಳೂರಿನಲ್ಲಿ ಒಂದೇ ವಾರದಲ್ಲಿ 8 ಕಾಲರಾ ಪ್ರಕರಣ ಪತ್ತೆಯಾಗಿರುವುದನ್ನು ಬಿಬಿಎಂ ಗಂಭೀರವಾಗಿ ಪರಿಗಣಿಸಿದ್ದು, ಹೀಗಾಗಿ ಹಲವು ಎಚ್ಚರಿಕೆ ಕ್ರಮಗಳನ್ನು ಜಾರಿಗೊಳಿಸಲು ಮುಂದಾಗಿದೆ.
ಬೆಂಗಳೂರಿನಲ್ಲಿ ಬೀದಿಬದಿಗಳನ್ನು ಹಣ್ಣುಗಳನ್ನು ಕತ್ತರಿಸಿ ಓಪನ್ ಆಗಿ ಇಟ್ಟು ಮಾರಾಟ ಮಾಡುವುದನ್ನು ಬಿಬಿಎಂಪಿ ನಿರ್ಬಂಧ ಮಾಡಿದೆ. ಬೀದಿಯಲ್ಲಿ ಗಾಡಿಗಳಲ್ಲಿ ಊಟ, ತಿಂಡಿ ಮಾರಾಟ ಮಾಡುವುದನ್ನು ನಿರ್ಧಿಷ್ಟ ಅವಧಿಯವರೆಗೆ ಬಿಬಿಎಂಪಿ ಅಧಿಕಾರಿಗಳು ಬ್ಯಾನ್ ಮಾಡಿದ್ದಾರೆ.
ಇನ್ನೂ ರೆಸ್ಟೋರೆಂಟ್ ಮತ್ತು ಹೊಟೇಲ್ ಗಳಲಲ್ಲಿ ಗ್ರಾಹಕರಿಗೆ ಬಿಸಿ ನೀರು ಕೊಡಬೇಕು ಎಂದು ಬಿಬಿಎಂಪಿ ಸೂಚಿಸಿದೆ.
ಕಾಲರಾ ಹರಡುವಿಕೆಯಲ್ಲಿ ನೀರಿನ ಪಾತ್ರ ಪ್ರಮುಖವಾಗಿದೆ. ಸದ್ಯ ಬೇಸಿಗೆ ಇರುವುದರಿಂದ ನೀರಿನ ಸಮಸ್ಯೆ ತಲೆದೋರಿದೆ. ಹೀಗಾಗಿ ಹೆಚ್ಚಿನ ಮಟ್ಟದಲ್ಲಿ ನೀರಿನ ಸರಬರಾಜು ಮಾಡಿಕೊಳ್ಳುತ್ತಿರುವುದರಿಂದ ಕಲುಶಿತ ನೀರು ಪೂರೈಕೆ ಆಗುತ್ತಿದೆ. ಹೀಗಾಗಿ ಕಾಲರಾ ವಾಂತಿ, ಭೇದಿ ಕೂಡ ಹೆಚ್ಚಾಗುತ್ತಿದೆ ಎಂದು ಬಿಬಿಎಂಪಿ ಹೇಳಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth