ಆಸ್ಪತ್ರೆ ಹಾಗೂ ಶಾಲೆಗಳಲ್ಲಿ ಜಂಕ್ ಫುಡ್ ನಿಷೇಧ: ಆರೋಗ್ಯ ಸಚಿವರ ಕ್ರಮಕ್ಕೆ ಸ್ವಾಗತ

u t khadar.jpg
20/07/2026

ಆಸ್ಪತ್ರೆಗಳು ಹಾಗೂ ಶಾಲಾ–ಕಾಲೇಜುಗಳ ಆವರಣದಲ್ಲಿ ಜಂಕ್ ಫುಡ್ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸುವ ರಾಜ್ಯ ಸರ್ಕಾರದ ಹಾಗೂ ಆರೋಗ್ಯ ಸಚಿವರ ನಿರ್ಧಾರ ಅತ್ಯಂತ ಶ್ಲಾಘನೀಯವಾಗಿದೆ.

ಜಂಕ್ ಫುಡ್ ನ ಅತಿಯಾದ ಸೇವನೆಯಿಂದ ಮಕ್ಕಳಲ್ಲಿ ಮತ್ತು ಯುವಜನರಲ್ಲಿ ಸ್ಥೂಲಕಾಯ, ಮಧುಮೇಹ, ರಕ್ತದೊತ್ತಡ ಸೇರಿದಂತೆ ಅನೇಕ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿರುವುದು ಆತಂಕಕಾರಿ. ಇಂತಹ ಸಂದರ್ಭದಲ್ಲಿ ಆರೋಗ್ಯಕರ ಆಹಾರ ಪದ್ಧತಿಯನ್ನು ಉತ್ತೇಜಿಸುವ ಉದ್ದೇಶದಿಂದ ಕೈಗೊಂಡಿರುವ ಈ ಕ್ರಮವು ಜನರ ಆರೋಗ್ಯ ರಕ್ಷಣೆಗೆ ಮಹತ್ವದ ಹೆಜ್ಜೆಯಾಗಿದೆ.

ಆಸ್ಪತ್ರೆಗಳು ಆರೋಗ್ಯ ಕಾಪಾಡುವ ಕೇಂದ್ರಗಳಾಗಿದ್ದು, ಶಾಲೆಗಳು ಮಕ್ಕಳ ಉತ್ತಮ ಭವಿಷ್ಯ ರೂಪಿಸುವ ಶಿಕ್ಷಣ ಸಂಸ್ಥೆಗಳಾಗಿವೆ. ಇಂತಹ ಸ್ಥಳಗಳಲ್ಲಿ ಪೌಷ್ಟಿಕ ಆಹಾರಕ್ಕೆ ಆದ್ಯತೆ ನೀಡುವುದು ಕಾಲದ ಅಗತ್ಯವಾಗಿದೆ.

ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ, ಆರೋಗ್ಯಕರ ಆಹಾರದ ಕುರಿತು ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸಕ್ಕೂ ಸರ್ಕಾರ ಹೆಚ್ಚಿನ ಒತ್ತು ನೀಡಬೇಕು. ಜನರ ಆರೋಗ್ಯ ಹಿತಾಸಕ್ತಿಯನ್ನು ಕಾಪಾಡುವ ಈ ನಿರ್ಧಾರಕ್ಕೆ ಆರೋಗ್ಯ ಸಚಿವರಾದ ಯು.ಟಿ.ಖಾದರ್ ರವರಿಗೆ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ.

ವರದಿ : ಕಮಲಾಕ್ಷ ಬಜಾಲ್


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

 


 

ಇತ್ತೀಚಿನ ಸುದ್ದಿ

Exit mobile version