ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಬಳಕೆ, ಉತ್ಪಾದನೆ ಹಾಗೂ ಮಾರಾಟಕ್ಕೆ ನಿರ್ಬಂಧ: ಸರ್ಕಾರದ ಮಹತ್ವದ ನಿರ್ಧಾರ - Mahanayaka

ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಬಳಕೆ, ಉತ್ಪಾದನೆ ಹಾಗೂ ಮಾರಾಟಕ್ಕೆ ನಿರ್ಬಂಧ: ಸರ್ಕಾರದ ಮಹತ್ವದ ನಿರ್ಧಾರ

half-helmets
01/10/2026

ಬೆಂಗಳೂರು: ಬೈಕ್ ಸವಾರರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರವು ಅಸುರಕ್ಷಿತ ಅರ್ಧ ಹೆಲ್ಮೆಟ್ (ಹಾಫ್ ಹೆಲ್ಮೆಟ್)ಗಳ ಬಳಕೆ, ಉತ್ಪಾದನೆ ಮತ್ತು ಮಾರಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲು ನಿರ್ಧರಿಸಿದೆ.

ವಿಕಾಸಸೌಧದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಸಾರಿಗೆ ಸಚಿವ ಬೈರತಿ ಸುರೇಶ್ ಅವರ ನೇತೃತ್ವದಲ್ಲಿ ನಡೆದ ರಸ್ತೆ ಸುರಕ್ಷತೆ ಮತ್ತು ಟ್ರಾಫಿಕ್ ನಿಯಮಗಳ ಉಲ್ಲಂಘನೆ ಕುರಿತ ಮಹತ್ವದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ತಯಾರಿಕಾ ಕಂಪನಿಗಳಿಗೂ ಎಚ್ಚರಿಕೆ:

ಇನ್ನು ಮುಂದೆ ಬೈಕ್ ಸವಾರರ ಮೇಲೆ ಮಾತ್ರವಲ್ಲದೆ, ಮಾರುಕಟ್ಟೆಯಲ್ಲಿ ಅಸುರಕ್ಷಿತ ಹಾಫ್ ಹೆಲ್ಮೆಟ್‌ ಗಳನ್ನು ಉತ್ಪಾದಿಸಿ ಮಾರಾಟ ಮಾಡುತ್ತಿರುವ ಕಂಪನಿಗಳ ವಿರುದ್ಧವೂ ಕಠಿಣ ಕ್ರಮ ಜರುಗಿಸಲು ಸರ್ಕಾರ ಮುಂದಾಗಿದೆ. ಕಾನೂನು ವ್ಯಾಪ್ತಿಯಲ್ಲಿ ಇಂತಹ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಸ್ಪಷ್ಟಪಡಿಸಿದ್ದಾರೆ.

ಸಂಚಾರಿ ನಿಯಮಗಳಡಿ ಹಾಫ್ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಲು ಅವಕಾಶವಿಲ್ಲದಿದ್ದರೂ, ಅನೇಕರು ಕೇವಲ ದಂಡದಿಂದ ತಪ್ಪಿಸಿಕೊಳ್ಳಲು ಮಾತ್ರ ಈ ಹೆಲ್ಮೆಟ್‌ ಗಳನ್ನು ಬಳಸುತ್ತಿದ್ದಾರೆ. ಇದು ನಿಯಮ ಉಲ್ಲಂಘನೆ ಎಂಬುದು ತಿಳಿದಿದ್ದರೂ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವುದರಿಂದ, ಇದಕ್ಕೆ ಸಂಪೂರ್ಣ ಬ್ರೇಕ್ ಹಾಕಲು ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.

ಇತ್ತೀಚಿನ ಸುದ್ದಿ

Suspected Malware | Cloudflare

Warning

Suspected Malware

This website has been reported for potentially distributing malware.

Malware is malicious software created to intentionally disrupt the normal operations of a device.

Learn More