ಸಂಪರ್ಕ ಕಡಿತದ ಭೀತಿಯಲ್ಲಿ ಬಣಕಲ್ ದೇವರಮನೆ ರಸ್ತೆ - Mahanayaka

ಸಂಪರ್ಕ ಕಡಿತದ ಭೀತಿಯಲ್ಲಿ ಬಣಕಲ್ ದೇವರಮನೆ ರಸ್ತೆ

chikkamagaluru
30/11/2023

ಕೊಟ್ಟಿಗೆಹಾರ: ಬಣಕಲ್ ಗ್ರಾಮ ಹಾಗೂ ದೇವರಮನೆಗೆ ಸಾಗುವ ರಸ್ತೆಯಲ್ಲಿ ಸೇತುವೆ ಶಿಥಿಲಗೊಂಡಿದ್ದು ದುರಸ್ತಿಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.


Provided by

ಮುಖಂಡ ಬಿಎಸ್ ವಿಕ್ರಂ  ಮಾತನಾಡಿ ‘ ಬಣಕಲ್ ಗ್ರಾಮ ದೇವರಮನೆ ಕೋಗಿಲೆ ಕೋಡೆಬೈಲ್ ಹಲವಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಬಣಕಲ್ ದೇವರಮನೆ ರಸ್ತೆಯು ಈಗ ಸಂಪರ್ಗ ಕಡಿತದ ಭೀತಿ ಎದುರಾಗಿದೆ ರಾಷ್ಟ್ರೀಯ ಹೆದ್ದಾರಿಗೆ ಬಣಕಲ್ ಗ್ರಾಮದಿಂದ ಸಂಪರ್ಕಿಸುವ ಸೇತುವೆಯ ಮಧ್ಯಭಾಗದಲ್ಲಿ ಕುಸಿತವಾಗಿದ್ದು ಅಪಘಾತಕ್ಕೆ ಆಹ್ವಾನ ನೀಡುವಂತಾಗಿದೆ.

ದೇವರ ಮನೆಯು ಧಾರ್ಮಿಕ ಹಾಗೂ ಪ್ರವಾಸಿ ತಾಣವಾಗಿದ್ದು ಈ ರಸ್ತೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಜನರು ಬರುತ್ತಿದ್ದಾರೆ.ಆದರೆ ಸೇತುವೆ ಬಾರಿ ಹಳೆಯ ಸೇತುವೆಯಾಗಿದ್ದು ಅದು ಈಗ  ಶಿಥಿಲಗೊಂಡು ರಸ್ತೆಯ ಮೇಲೆ ಕಂದಕ ನಿರ್ಮಾಣವಾಗಿದೆ.ಆದರೆ ರಸ್ತೆಯು ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವುದರಿಂದ ಗ್ರಾಮಸ್ಥರಿಗೂ ತೊಂದರೆಯಾಗಿದೆ.ಈ ರಸ್ತೆಯಲ್ಲಿ ಸರಕು ತುಂಬಿದ ವಾಹನಗಳು, ಪ್ರವಾಸಿಗರ ವಾಹನಗಳು ತಿರುಗುತ್ತಿರುವುದರಿಂದ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ. ಈ ರಸ್ತೆ  ದೇವರಮನೆ ದೇವಸ್ಥಾನಕ್ಕೆ ತೆರಳುವ ಪ್ರಮುಖ ರಸ್ತೆಯಾಗಿದ್ದು ಪ್ರವಾಸಿಗರ ವಾಹನಗಳು ಮಂಜು ಕವಿದ ವಾತಾವರಣ ಇರುವುದರಿಂದ ಇಲ್ಲಿ ಅಪಘಾತ ಸಂಭವಿಸಿ ಪ್ರಾಣಹಾನಿಯಾಗುವ ಸಾಧ್ಯತೆಗಳಿವೆ.

ಈಗ ಈ ರಸ್ತೆಗೆ ಕಾಮಗಾರಿಗೆ ಅನುದಾನ ಬರುವವರೆಗೂ ತಾತ್ಕಾಲಿಕ ರಸ್ತೆ ನಿರ್ಮಿಸಿ ಈ ಸೇತುವೆ ಮೇಲೆ ಸಂಚಾರ ಸ್ಥಗಿತಗೊಳಿಸುವುದರಿಂದ ಸಂಪರ್ಕ ಸೇತುವೆ ಉಳಿಯಲಿದೆ.ಹಾಗೂ ಈ ರಸ್ತೆಯಲ್ಲಿ ಘನ ಹಾಗೂ ಟೆಂಪೊ, ಮಿನಿ ಬಸ್ ಸಂಚಾರ ಸ್ಥಗಿತಗೊಳಿಸಿ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ವ್ಯವಸ್ಥೆ ಮಾಡಬೇಕು.  ಕೆಲವು ದಿನದ ಹಿಂದೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಬಂದು ಸ್ಥಳ ಪರಿಶೀಲನೆ ಮಾಡಿದ್ದಾರೆ.ಆದರೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ನೂತನ ಸೇತುವೆ ಆಗುವವರೆಗೂ ತಾತ್ಕಾಲಿಕ ರಸ್ತೆ ನಿರ್ಮಿಸಬೇಕೆಂದು ಅವರು ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ