ಅಧಿಕಾರಿಗಳೇ ಶೇಮ್ ಶೇಮ್…! | ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿ ಮಾಡಿಕೊಂಡ ಬಣಕಲ್ ಕಲ್ಯಾಣ ಗದ್ದೆ ಗ್ರಾಮಸ್ಥರು
ಕೊಟ್ಟಿಗೆಹಾರ :ಸ್ವಂತ ಖರ್ಚಿನಲ್ಲಿ ರಸ್ತೆ ನಿರ್ಮಾಣವು ಸಾಮಾನ್ಯವಾಗಿ ಸರ್ಕಾರದಿಂದ ಸರಿಯಾದ ಸ್ಪಂದನೆ ಸಿಗದಿದ್ದಾಗ ಅಥವಾ ನಿರ್ಲಕ್ಷಕ್ಕೆ ಒಳಗಾದಾಗ ಜನರು, ನಿವಾಸಿಗಳು ಅಥವಾ ರೈತರು ಸೇರಿ ತಮ್ಮದೇ ಹಣದಿಂದ ಮತ್ತು ಶ್ರಮದಿಂದ ರಸ್ತೆ ನಿರ್ಮಿಸಿಕೊಳ್ಳುವ ಒಂದು ಪ್ರಕ್ರಿಯೆಯಾಗಿದೆ. ಇದು ಅಧಿಕಾರಿಗಳ ಅಥವಾ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಬೇಸತ್ತು, ಸ್ವಂತ ಖರ್ಚಿನಲ್ಲಿ ತಾತ್ಕಾಲಿಕ ಅಥವಾ ಸುಸರ್ಜಿತ ರಸ್ತೆ ನಿರ್ಮಿಸಿಕೊಳ್ಳುವ ಒಂದು ಪರಿಸ್ಥಿತಿಯಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕ್ಕಿನ ಹೆಗ್ಗುಡ್ಲು ಗ್ರಾಮದ ಕಲ್ಯಾಣ ಗದ್ದೆ ಹೋಗುವ ಹದಗೆಟ್ಟಿರುವ ರಸ್ತೆಯನ್ನು ಸಾರ್ವಜನಿಕರೇ ಹಣ ಸಂಗ್ರಹಿಸಿ ದುರಸ್ತಿ ಕಾರ್ಯ ಮಾಡಿದ್ದಾರೆ.
ಸುಮಾರು 2ಲಕ್ಷ ಹಣ ಸಂಗ್ರಹಿಸಿ ಗ್ರಾಮಸ್ಥರೇ ರಸ್ತೆ ದುರಸ್ಥಿ ಕಾರ್ಯ ಮಾಡಿದ್ದಾರೆ. ಹದಗೆಟ್ಟ ರಸ್ತೆಯನ್ನು ಹಣ ಕೂಡಿಸಿ ಗುಂಡಿ ಮುಚ್ಚಿಸಿ ಮಾದರಿ ಎನಿಸಿದ್ದಾರೆ.ತಮ್ಮ ಸ್ವಂತ ಕೆಲಸ ಕಾರ್ಯಗಳನ್ನು ಬಿಟ್ಟು ಗ್ರಾಮಕ್ಕಾಗಿ ರಸ್ತೆ ದುರಸ್ತಿ ಕಾರ್ಯ ಮಾಡಿಸಿ ಅಚ್ಚರಿ ಮೂಡಿಸಿದ್ದಾರೆ. ಹದಗೆಟ್ಟಿರುವ ರಸ್ತೆಯನ್ನು ದುರಸ್ತಿ ಮಾಡಿಕೊಡುವಂತೆ ಜನ ಪ್ರತಿನಿಧಿಗಳಿಗೆ ಈಗಾಗಲೇ ಅನೇಕ ಬಾರಿ ಮನವಿ ಮಾಡಿಕೊಂಡಿದ್ದರೂ ಯಾವುದೇ ಪ್ರಯೋಜನಕ್ಕೆ ಬರಲಿಲ್ಲ. ಭ್ರಮನಿರಸನಗೊಂಡ ಗ್ರಾಮಸ್ಥರೇ ಹಣ ಸಂಗ್ರಹಿಸಿ ರಸ್ತೆ ದುರಸ್ತಿ ಮಾಡಿದ್ದಾರೆ.
ಹಲವು ಬಾರಿ ತಮ್ಮ ಮನವಿಯನ್ನು ಸ್ವೀಕರಿಸಿ ರಸ್ತೆ ದುರಸ್ತಿ ಮಾಡಿಕೊಡದ ಜನಪ್ರತಿನಿಧಿಗಳು ಹಾಗೂ ಸರ್ಕಾರದ ವಿರುದ್ಧ ಗ್ರಾಮಸ್ಥರು ಹಿಡಿಶಾಪ ಹಾಕುತ್ತಿದ್ದಾರೆ. ಮಳೆಗಾಲದಲ್ಲಿ ಮೊಣಕಾಲುದ್ಧ ನೀರು ನಿಲ್ಲುತ್ತಿತ್ತು, ರಾಡುಗಳು ರಸ್ತೆಯಿಂದ ಮೇಲೆ ಎದ್ದು ಜನರ ಜೀವಕ್ಕೆ ಅಪಾಯ ತಂದೊಡ್ಡುವುದು ಖಾತರಿಯಾಗಿತ್ತು. ಇದರಿಂದ ಗ್ರಾಮಸ್ಥರಿಗೆ ಓಡಾಡಲು ತುಂಬಾ ಕಷ್ಟವಾಗಿತ್ತು. ಹೀಗಾಗಿ ಸ್ವತಃ ಗ್ರಾಮದಲ್ಲಿ ಗ್ರಾಮಸ್ಥರು ಹಣ ಸಂಗ್ರಹಿಸಿ ರಸ್ತೆ ಗುಂಡಿ ಮುಚ್ಚಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD























