ದೇವರಮನೆಗೆ ಬರುವ ಪ್ರವಾಸಿಗರಿಂದ ಬಣಕಲ್ ಗ್ರಾಮಸ್ಥರಿಗೆ ಕಿರಿಕಿರಿ!

ಕೊಟ್ಪಿಗೆಹಾರ: ಪ್ರವಾಸಿ ತಾಣ ಹಾಗೂ ಐತಿಹಾಸಿಕ ಸ್ಥಳ ದೇವರ ಮನೆಯಲ್ಲಿ ಕೆಲ ಪ್ರವಾಸಿಗರ ಉಪಟಳದಿಂದ ಬಣಕಲ್ ಗ್ರಾಮಸ್ಥರಿಗೆ ಕಿರಿಕಿರಿ ಉಂಟಾಗಿದೆ.
ಭಾನುವಾರ ದೇವರಮನೆಯಲ್ಲಿ ಕೆಲ ಪ್ರವಾಸಿಗರು ಅನುಚಿತವಾಗಿ ವರ್ತಿಸಿದ್ದು, ಗ್ರಾಮಸ್ಥರು ಆ ಪ್ರವಾಸಿಗರನ್ನು ತರಾಟೆಗೆ ತೆಗೆದುಕೊಂಡು ಬಣಕಲ್ ಠಾಣೆಯಲ್ಲಿ ಪೊಲೀಸರ ಸಮ್ಮುಖದಲ್ಲಿ ಎಚ್ಚರಿಕೆ ನೀಡಿ ಕಳಿಸಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಬಣಕಲ್ ಗ್ರಾಮಸ್ಥರಾದ ಬಿ.ಎಸ್ ವಿಕ್ರಂ, ದೇವರಮನೆ ಪ್ರವಾಸಿತಾಣಕ್ಕೆ ಬರುತ್ತಿರುವ ಕೆಲ ಪ್ರವಾಸಿಗರು ಮದ್ಯಪಾನ ಮತ್ತು ಮಾದಕ ವ್ಯಸನ ಮಾಡುತ್ತಿದ್ದು, ದೇವರಮನೆಯಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದಾರೆ. ನಿಸರ್ಗ ರಮಣೀಯ ತಾಣ ದೇವರ ಮನೆಯಲ್ಲಿ ಮೋಜುಮಸ್ತಿಯಲ್ಲಿ ತೊಡಗುತ್ತಿದ್ದು ಇದರಿಂದ ಬಣಕಲ್ ಗ್ರಾಮಸ್ಥರಿಗೆ ತೊಂದರೆಯಾಗುತ್ತಿದೆ.
ಕೇಕೆ ಹಾಕುವುದು ಮದ್ಯ ಬಾಟಲಿಗಳನ್ನು ಒಡೆದು ಹಾಕುವುದು ಮುಂತಾದ ಕೆಲಸಗಳನ್ನು ಕೆಲ ಪ್ರವಾಸಿಗರು ಮಾಡುತ್ತಿದ್ದಾರೆ. ದೇವರಮನೆಯಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ ಕಿಡಿಗೇಡಿಗಳ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವ ಅಗತ್ಯವಿದೆ. ರಾತ್ರಿ ಸಮಯದಲ್ಲೂ ಕೆಲ ಪ್ರವಾಸಿಗರು ದೇವರಮನೆಗೆ ಬರುತ್ತಿದ್ದು ಇದಕ್ಕೆ ಕಡಿವಾಣ ಹಾಕಬೇಕಿದೆ.
ದೇವರಮನೆಗೆ ಸಾಗುವ ರಸ್ತೆಯುದ್ದಕ್ಕೂ ಪ್ಲಾಸ್ಟಿಕ್, ಮದ್ಯ ಬಾಟಲಿಯನ್ನು ಎಸೆಯುವುದು ನಡೆಯುತ್ತಿದೆ. ಇದರಿಂದಾಗಿ ಪರಿಸರ ಮಾಲಿನ್ಯವಾಗುತ್ತಿದ್ದು ಗ್ರಾಮಸ್ಥರಿಗೂ ಕಿರಿಕಿರಿಯಾಗುತ್ತಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ ಎಂದು ಒತ್ತಾಯಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw