10:35 AM Thursday 4 - September 2025

ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಇಂದು ತುಮಕೂರು ಜಿಲ್ಲೆ ಬಂದ್

thumakur 1
25/06/2024

ತುಮಕೂರು: ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಇಂದು ತುಮಕೂರು ಜಿಲ್ಲೆ ಬಂದ್ ಗೆ ವಿವಿಧ ಸಂಘಟನೆಗಳು ಕರೆ ನೀಡಿದ್ದು, ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಮಾಜಿ ಸಚಿವ ಸೊಗಡು ಶಿವಣ್ಣ ನೇತೃತ್ವದಲ್ಲಿ ಬಂದ್ ಗೆ ಕರೆ ನೀಡಲಾಗಿತ್ತು. ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಈ ಬಂದ್ ನ್ನು ಬೆಂಬಲಿಸಿದ್ದಾರೆ.

ಬೆಳಗ್ಗಿನಿಂದ ಎಂದಿನಂತೆ ಜನಜೀವನ ಪ್ರಾರಂಭವಾಗಿದೆ. 10 ಗಂಟೆಯ ವೇಳೆಗೆ ರಸ್ತೆ ತಡೆದು ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ತುಮಕೂರು ಟೌನ್ ಹಾಲ್ ನಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಪ್ರತಿಭಟನೆಯಲ್ಲಿ ಶಾಸಕ ಜ್ಯೋತಿ ಗಣೇಶ್, ಸುರೇಶ್ ಗೌಡ, ಎಂ.ಟಿ.ಕೃಷ್ಣಪ್ಪ, ಸುರೇಶ್ ಬಾಬು ಭಾಗಿ ಸಾಧ್ಯತೆ ಇದೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

 

ಇತ್ತೀಚಿನ ಸುದ್ದಿ

Exit mobile version