10:32 AM Saturday 23 - August 2025

ಮೋದಿ ಭೇಟಿ ಹಿನ್ನೆಲೆಯಲ್ಲಿ 4 ದಿನ ಬಂಡೀಪುರ ಸಫಾರಿ ನಿಷೇಧ

chamaraj nagar
05/04/2023

ಚಾಮರಾಜನಗರ: ಇದೇ 9 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರಕ್ಕೆ ಭೇಟಿ ಕೊಡಲಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಫಾರಿ ನಿಷೇಧಿಸಿ ಚಾಮರಾಜನಗರ ಡಿಸಿ ರಮೇಶ್ ಆದೇಶ ಹೊರಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಹಿನ್ನೆಲೆಯಲ್ಲಿ ಬಿಗಿ ಭದ್ರತೆ, ಪೂರ್ವ ಸಿದ್ಧತೆ ಕೈಗೊಳ್ಳುವ ಉದ್ದೇಶದಿಂದ 5 ರಿಂದ 9 ರವರೆಗೆ ವನ್ಯಜೀವಿ ಸಫಾರಿಯನ್ಬು ನಿರ್ಬಂಧಿಸಿ ಡಿಸಿ ಆದೇಶ ಹೊರಡಿಸಿದ್ದಾರೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶವು ರಾಜ್ಯದಲ್ಲೇ ಅತ್ಯಧಿಕ ಹುಲಿಗಳಿರುವ ರಕ್ಷಿತಾರಣ್ಯವಾಗಿದ್ದು ಪ್ರತಿದಿನ ಬೆಳಗ್ಗೆ ಹಾಗೂ ಸಂಜೆ ಸಫಾರಿ ನಡೆಯುತ್ತಿತ್ತು. ಬಂಡೀಪುರ ಕಾಡು ನೋಡಲೆಂದೇ ಸಾವಿರಾರು ಪ್ರವಾಸಿಗರು ಲಗ್ಗೆ ಇಡುತ್ತಾರೆ. ಈಗ ದೇಶದ ಪ್ರಧಾನಿ ಮೋದಿ ಅವರೇ ಬಂಡೀಪುರದಲ್ಲಿ ಸಫಾರಿ ನಡೆಸಲಿದ್ದಾರೆ. ಜೊತೆಗೆ, ಅರಣ್ಯ ಸಿಬ್ಬಂದಿ ಜೊತೆ ಸಂವಾದವನ್ನು ಮಾಡಲಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version