ಬೆಂಗಳೂರಿನಲ್ಲಿ ಮತ್ತೊಂದು ಭಾರೀ ಅಗ್ನಿ ದುರಂತ | ಕೆಮಿಕಲ್ ಫ್ಯಾಕ್ಟರಿಯ ಬಾಯ್ಲರ್ ಸ್ಫೋಟ - Mahanayaka

ಬೆಂಗಳೂರಿನಲ್ಲಿ ಮತ್ತೊಂದು ಭಾರೀ ಅಗ್ನಿ ದುರಂತ | ಕೆಮಿಕಲ್ ಫ್ಯಾಕ್ಟರಿಯ ಬಾಯ್ಲರ್ ಸ್ಫೋಟ

fire
24/09/2021

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ ನಡೆದಿದ್ದು, ಇಲ್ಲಿನ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡಿದ್ದು, ಪರಿಣಾಮವಾಗಿ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.


Provided by

ಬೆಂಗಳೂರಿನ ಅತ್ತಿಬೆಲೆ ಕೈಗಾರಿಕಾ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ  ಈ ಘಟನೆ ನಡೆದಿದ್ದು,  ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳ ಪೈಕಿ ಓರ್ವನ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

ಫ್ಯಾಕ್ಟರಿ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಕೆಮಿಕಲ್ ಘಾಟು ತುಂಬಿಕೊಂಡಿದ್ದು, ದಟ್ಟ ಹೊಗೆ ಆವರಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.


Provided by

ಇನ್ನೂ ಕಾರ್ಯಾಚರಣೆ ನಡೆಸಲು ಕೆಮಿಕಲ್ ನ ವಾಸನೆ ತೀವ್ರವಾಗಿ ಅಡ್ಡಿಪಡಿಸುತ್ತಿದೆ ಎಂದು ಹೇಳಲಾಗಿದೆ. ಕಳೆದ ಹಲವು ದಿನಗಳಿಂದ ಒಂದರ ಹಿಂದೊಂದರಂತೆ ಬೆಂಗಳೂರಿನಲ್ಲಿ ಅಗ್ನಿ ದುರಂತಗಳು ನಡೆಯುತ್ತಲೇ ಇವೆ. ಇದರಿಂದಾಗಿ ಬೆಂಗಳೂರಿನ ಜನರು ಆತಂಕಕ್ಕೀಡಾಗಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ಬಿಜೆಪಿ ಚುನಾವಣೆಗೆ ಮಾತ್ರ ಹಿಂದುಳಿದ ವರ್ಗಗಳನ್ನು ಬಳಸುತ್ತಿರುವುದು ಬಯಲಾಗಿದೆ | ಮಾಯಾವತಿ ಆಕ್ರೋಶ

ತಾತಾ ಆದ ಮಾಜಿ ಮುಖ್ಯಮಂತ್ರಿ ಕುಮಾಸ್ವಾಮಿ | ದೇವೇಗೌಡ್ರ ಮನೆಯಲ್ಲಿ ಸಂಭ್ರಮ

ಪ್ರತಿಭಟನಾಕಾರನ ದೇಹದ ಮೇಲೆ ಹಾರಿಹಾರಿ ಬಿದ್ದಿದ್ದ ಪತ್ರಕರ್ತ ಅರೆಸ್ಟ್

ಕ್ಯಾನ್ಸರ್ ನ್ನು ಗೆದ್ದವ ಪಾರ್ಟಿಯಲ್ಲಿ ಬಿಯರ್ ಬ್ಯಾರೆಲ್ ಸ್ಫೋಟಗೊಂಡು ಮೃತಪಟ್ಟ!

ಟಾಂಗಾ ಮೂಲಕ ವಿಧಾನಸೌಧಕ್ಕೆ ಬಂದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್!

ರಕ್ತದಲ್ಲಿ ಹಿಮೋಗ್ಲೋಬಿನ್ ಕಡಿಮೆಯಾದರೆ ಗಂಭೀರ ಸಮಸ್ಯೆ ಉಂಟಾಗಬಹುದು | ಇದಕ್ಕೆ ಪರಿಹಾರವೇನು?

ಮನಮೋಹನ್ ಸಿಂಗ್ ವಿಮಾನದಲ್ಲಿಯೇ ಪತ್ರಿಕಾಗೋಷ್ಠಿ ನಡೆಸಿದ್ದರು | ಮೋದಿ ಫೋಟೋಗೆ ಕಾಂಗ್ರೆಸ್ ತಿರುಗೇಟು

ಲಾಲ್ ಬಹದ್ದೂರು ಶಾಸ್ತ್ರಿಯವರಂತೆಯೇ, ಪ್ರಧಾನಿ ಮೋದಿ ಫೋಟೋ | ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯೋ ಚರ್ಚೆ?

ಇತ್ತೀಚಿನ ಸುದ್ದಿ