ಬೆಳ್ತಂಗಡಿ: ಪರೋಲ್ ನಲ್ಲಿ ಬಂದು ತಲೆಮರೆಸಿಕೊಂಡಿದ್ದಾತನನ್ನು 15 ವರ್ಷಗಳ ಬಳಿಕ ಬಂಧಿಸಿದ ಬೆಂಗಳೂರು ಪೊಲೀಸರು - Mahanayaka

ಬೆಳ್ತಂಗಡಿ: ಪರೋಲ್ ನಲ್ಲಿ ಬಂದು ತಲೆಮರೆಸಿಕೊಂಡಿದ್ದಾತನನ್ನು 15 ವರ್ಷಗಳ ಬಳಿಕ ಬಂಧಿಸಿದ ಬೆಂಗಳೂರು ಪೊಲೀಸರು

arrest
22/12/2022

ಪೆರೋಲ್ ಮೇಲೆ ಬಂದು ತಲೆಮರೆಸಿಕೊಂಡಿದ್ದ ಅಸಾಮಿಯನ್ನು ಬೆಂಗಳೂರಿನ ಮಡಿವಾಳ ಪೊಲೀಸರು 15 ವರ್ಷಗಳ ಬಳಿಕ ಇದೀಗ ಬೆಳ್ತಂಗಡಿಯಲ್ಲಿ ಬಂಧಿಸಿದ ಘಟನೆ ನಡೆದಿದೆ.

ಸುಹೇಲ್ ಅಲಿಯಾಸ್ ಮೊಹಮ್ಮದ್ ಅಯಾಜ್ ಬಂಧಿತ ಆರೋಪಿಯಾಗಿದ್ದಾನೆ. 2007 ರಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ ಪೆರೋಲ್ ಮೇಲೆ ತೆರಳಿದ್ದ ಅಸಾಮಿ, 30 ದಿನಗಳ ಪೆರೋಲ್ ಮೇಲೆ ಹೋಗಿದ್ದ ಬಳಿಕ ಬೆಳ್ತಂಗಡಿಯಲ್ಲಿ ತಲೆಮರೆಸಿಕೊಂಡಿದ್ದ

ಬೆಳ್ತಂಗಡಿಯಲ್ಲಿ ಮಹಮ್ಮದ್ ಅಯಾಜ್ ಎಂದು ಹೆಸರು ಬದಲಿಸಿಕೊಂಡು ವಾಸಿಸುತ್ತಿದ್ದ ಈತ,  ಆಯುರ್ವೇದಿಕ್ ಮೆಡಿಸಿನ್ ಬಿಜಿನೆಸ್ ಮಾಡಿಕೊಂಡಿದ್ದ.

ಸುಹೇಲ್ ಕೊಲೆ, ಕಳವು, ಸುಲಿಗೆ, ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ.  ಇದೀಗ ಆರೋಪಿಯನ್ನು ಮತ್ತೆ ಬಂಧಿಸಿದ  ಮಡಿವಾಳ ಪೊಲೀಸರು ಜೈಲಿಗೆ ಅಟ್ಟಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ