10:37 PM Saturday 1 - November 2025

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ: ಡಿ.ಕೆ.ಸುರೇಶ್ ಗೆ ಹೀನಾಯ ಸೋಲು

d.k suresh 1
04/06/2024

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಅಚ್ಚರಿಯ ಫಲಿತಾಂಶ ಹೊರಬಿದ್ದಿದ್ದು, ಹಾಲಿ ಸಂಸದ ಡಿ.ಕೆ.ಸುರೇಶ್ ವಿರುದ್ಧ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ 2 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವು ದಾಖಲಿಸಿದ್ದಾರೆ.
ಸತತ ಎರಡು ಬಾರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದ ಡಿ.ಕೆ.ಸುರೇಶ್ ಹೀನಾಯ ಸೋಲು ಅನುಭವಿಸಿದ್ದಾರೆ.

* ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ 8 ಲಕ್ಷ 99 ಸಾವಿರ 481
* ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್: 6 ಲಕ್ಷ 98 ಸಾವಿರ 032
* ಬಿಜೆಪಿ ಗೆಲುವಿನ ಅಂತರ: 2 ಲಕ್ಷ 01 ಸಾವಿರ 449

ಮೊದಲ ಹಂತದ ಮತಎಣಿಕೆಯಿಂದಲೂ ಡಾ.ಸಿ.ಎನ್ ಮಂಜುನಾಥ್ ಅವರು ಮುನ್ನಡೆ ಕಾಯ್ದುಕೊಂಡಿದ್ದರು. ಅಂತಿಮ ಹಂತದ ಮತಎಣಿಕೆಯಲ್ಲಿ ಡಿ.ಕೆ ಸುರೇಶ್ ವಿರುದ್ಧ ಬಿಜೆಪಿ ಅಭ್ಯರ್ಥಿ ಮಂಜುನಾಥ್ ಅವರು ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068

 

ಇತ್ತೀಚಿನ ಸುದ್ದಿ

Exit mobile version