3:45 AM Wednesday 15 - October 2025

ಅಮಿತ್ ಶಾಗೆ  ಝೀರೋ ಟ್ರಾಫಿಕ್: ಹಾರ್ನ್ ಮೊಳಗಿಸಿ ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು

bangalore traffic jam
03/05/2022

ಬೆಂಗಳೂರು: ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಹಿನ್ನೆಲೆಯಲ್ಲಿ ಝೀರೋ ಟ್ರಾಫಿಕ್ ಮಾಡಲಾಗಿದ್ದು, ಇದರಿಂದಾಗಿ ಬೆಂಗಳೂರಿನ ವಿವಿಧೆಡೆಗಳಲ್ಲಿ ಟ್ರಾಫಿಕ್ ಜಾಮ್ ನಿಂದ ವಾಹನ ಚಾಲಕರು ತಾಳ್ಮೆ ಕಳೆದುಕೊಂಡ ಘಟನೆ ನಡೆದಿದೆ.

ಅಮಿತ್ ಶಾ ಅವರು ಆಗಮನದ ಹಿನ್ನೆಲೆಯಲ್ಲಿ ಮುಖ್ಯ ರಸ್ತೆಯಾಗಿರುವ ರೇಸ್ ಕೋರ್ಸ್ ರಸ್ತೆಯ ಸಿಗ್ನಲ್ ಬಳಿಯಲ್ಲಿ ಪೊಲೀಸರು ಹಾಗೂ ವಾಹನ ಸವಾರರ ನಡುವೆ ತೀವ್ರ ವಾಗ್ವಾದ ಉಂಟಾಯಿತು.  ರಸ್ತೆ ಕ್ಲೀಯರ್ ಆಗುತ್ತದೆ ಎಂದು ಕಾಯುತ್ತಿದ್ದ  ವಾಹನ ಚಾಲಕರು ತಾಳ್ಮೆ ಕಳೆದುಕೊಂಡು ಹಾರ್ನ್ ಹಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾವು ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹೋಗಬೇಕು. ಈ ರೀತಿ ರಸ್ತೆ ಬಂದ್ ಮಾಡಿದ್ರೆ, ನಾವು ಹೇಗೆ ಹೋಗೋದು? ನಮ್ಮ ಕೆಲಸ ಹೋದರೆ ಅವರು ನಮಗೆ ಕೆಲಸ ಕೊಡಿಸ್ತಾರಾ? ಎಂದು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿರುವುದು ಕಂಡು ಬಂತು.

ಇನ್ನು ಕೆಲವೆಡೆ ವಾಹನ ಸವಾರರು ತಾಳ್ಮೆ ಕಳೆದುಕೊಂಡು ಸಿಕ್ಕ ಸಿಕ್ಕ ರಸ್ತೆಗಳಲ್ಲಿ ಪ್ರಯಾಣಿಸಿದ್ದು, ಅಲ್ಲೂ ಪೊಲೀಸರು ಅಡ್ಡ ಹಾಕಿದ ವೇಳೆ ಆಕ್ರೋಶಗೊಂಡು, ಒಂದು ಗಂಟೆಯಿಂದ ಕಾಯುತ್ತಿದ್ದೇವೆ ರೀ… ಎಷ್ಟು ಹೊತ್ತು ಕಾಯ್ಬೇಕು. ಇಲ್ಲೂ ಅಡ್ಡ ಹಾಕ್ತೀರಲ್ಲರೀ ಎಂದು ಪೊಲೀಸರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪರೀಕ್ಷೆ ಬರೆಯುತ್ತಿದ್ದ ವೇಳೆ ವಿದ್ಯಾರ್ಥಿನಿಯ ತಲೆಗೆ ಬಿದ್ದ ಸೀಲಿಂಗ್ ಫ್ಯಾನ್!

ನೈಟ್ ಕ್ಲಬ್ ನಲ್ಲಿ ರಾಹುಲ್ ಗಾಂಧಿ?:  ಏನಿದು ವೈರಲ್ ವಿಡಿಯೋ?

ಟೋಲ್ ಸಂಗ್ರಹ: ಫಾಸ್ಟ್ ಟ್ಯಾಗ್ ವ್ಯವಸ್ಥೆ ಶೀಘ್ರವೇ ರದ್ದು!

ವಿವಾಹ ವಾರ್ಷಿಕೋತ್ಸವದಂದೇ ಅಪಘಾತದಲ್ಲಿ ಕಾನ್ ಸ್ಟೇಬಲ್ ಸಾವು

ಭಾರತವನ್ನು ಹಿಂದೂ ರಾಷ್ಟ್ರ ಮಾಡಲು ಪ್ರತಿಜ್ಞೆ ಸ್ವೀಕರಿಸಿದ ಬಿಜೆಪಿ ಶಾಸಕ

ಇತ್ತೀಚಿನ ಸುದ್ದಿ

Exit mobile version