ಅಲ್ಪಸಂಖ್ಯಾತರಿಗೆ ಸುರಕ್ಷತಾ ವಿಚಾರ: ಮೋದಿ ಸರ್ಕಾರವನ್ನು ಪ್ರಶ್ನಿಸಿದ ಬಾಂಗ್ಲಾ ಸಚಿವರು
ಅಲ್ಪಸಂಖ್ಯಾತರಿಗೆ ಸುರಕ್ಷತೆ ನೀಡುವ ವಿಷಯದಲ್ಲಿ ದ್ವಂದ್ವ ನೀತಿಯನ್ನು ಅನುಸರಿಸುತ್ತಿರುವುದಕ್ಕೆ ಮೋದಿ ಸರಕಾರವನ್ನು ಬಾಂಗ್ಲಾ ಸಚಿವರು ಪ್ರಶ್ನಿಸಿದ್ದಾರೆ. ಅಲ್ಪಸಂಖ್ಯಾತರಾದ ಮುಸ್ಲಿಮರ ವಿರುದ್ಧ ದಾಳಿಗಳು ನಡೆಯುತ್ತಿರುವುದರ ಬಗ್ಗೆ ಭಾರತ ಸರಕಾರಕ್ಕೆ ಯಾವುದೇ ಕಾಳಜಿ ಇಲ್ಲ. ಆ ಬಗ್ಗೆ ಮಧ್ಯಪ್ರವೇಶಿಸದೆ ಬಾಂಗ್ಲಾದೇಶದ ವಿಷಯದಲ್ಲಿ ಅನಗತ್ಯ ಮಧ್ಯಪ್ರವೇಶ ನಡೆಸುತ್ತಿದೆ ಎಂದವರು ಆರೋಪಿಸಿದ್ದಾರೆ.
ಭಾರತದಲ್ಲಿ ಅಲ್ಪಸಂಖ್ಯಾತರಾದ ಮುಸ್ಲಿಮರ ಮೇಲೆ ತೀವ್ರ ಆಕ್ರಮಣಗಳು ನಡೆಯುತ್ತಿವೆ. ಆದರೆ ಈ ವಿಷಯದಲ್ಲಿ ಭಾರತ ಸರಕಾರಕ್ಕೆ ಯಾವುದೇ ಕಾಳಜಿ ಇಲ್ಲ. ಅದು ಬಿಟ್ಟು ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದಾಳಿಗಳು ನಡೆಯುತ್ತಿವೆ ಎಂದು ಹೇಳುತ್ತಿದೆ. ಭಾರತ ಸರಕಾರದ ಈ ದ್ವಂದ್ವ ನೀತಿ ಅಪಾಯಕಾರಿ ಮತ್ತು ವಿರೋಧಕ್ಕೆ ಅರ್ಹವಾಗಿದೆ. ಅಲ್ಪಸಂಖ್ಯಾತ ಹಿಂದೂಗಳ ರಕ್ಷಣೆಗೆ ಸಂಬಂಧಿಸಿದಂತೆ ಹಿಂದಿನ ಹಸೀನಾ ಸರಕಾರಕ್ಕಿಂತಲೂ ಹೆಚ್ಚು ಮುತ್ವರ್ಜಿಯಿಂದ ಈಗಿನ ಮಧ್ಯಂತರ ಸರಕಾರ ಕೆಲಸ ಮಾಡುತ್ತಿದೆ ಎಂದವರು ಹೇಳಿದ್ದಾರೆ.
ಬಾಂಗ್ಲಾದೇಶದ ವಿರುದ್ಧ ಭಾರತದ ಮಾಧ್ಯಮಗಳು ಕಪೋಲ ಕಲ್ಪಿತ ಸುದ್ದಿಗಳನ್ನು ಹರಡುತ್ತಿವೆ ಎಂದು ಬಾಂಗ್ಲಾದ ಮಧ್ಯಂತರ ಸರಕಾರದ ಮುಖ್ಯಸ್ಥರಾದ ಮೊಹಮ್ಮದ್ ಯೂನುಸ್ ಹೇಳಿದ್ದಾರೆ. ಇದರ ವಿರುದ್ಧ ಬಾಂಗ್ಲಾದೇಶದ ಪತ್ರಕರ್ತರು ಸೆಟೆದು ನಿಲ್ಲಬೇಕಾಗಿದೆ ಎಂದವರು ಕರೆಕೊಟ್ಟಿದ್ದಾರೆ.
ಭಾರತ ಸರಕಾರ ಅನವಶ್ಯಕವಾಗಿ ಬಾಂಗ್ಲಾದೇಶದ ಆಂತರಿಕ ವಿಷಯದಲ್ಲಿ ಮಧ್ಯಪ್ರವೇಶಿಸುತ್ತಿದೆ ಎಂದು ಧಾಕಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಬಳಿಕ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

























