ಬಾಂಗ್ಲಾದೇಶದಲ್ಲಿ ಅಶಾಂತಿ: ಮೂರು ತಿಂಗಳ ನಂತರ ರಾಷ್ಟ್ರೀಯ ಚುನಾವಣೆ; ಮಧ್ಯಂತರ ಸರ್ಕಾರವನ್ನು ರಚಿಸಲು ಸಜ್ಜಾದ ಬಿಎನ್‌ಪಿ ಮತ್ತು ಜಮಾಅತೆ ಇ ಇಸ್ಲಾಮಿ - Mahanayaka
4:48 AM Wednesday 17 - September 2025

ಬಾಂಗ್ಲಾದೇಶದಲ್ಲಿ ಅಶಾಂತಿ: ಮೂರು ತಿಂಗಳ ನಂತರ ರಾಷ್ಟ್ರೀಯ ಚುನಾವಣೆ; ಮಧ್ಯಂತರ ಸರ್ಕಾರವನ್ನು ರಚಿಸಲು ಸಜ್ಜಾದ ಬಿಎನ್‌ಪಿ ಮತ್ತು ಜಮಾಅತೆ ಇ ಇಸ್ಲಾಮಿ

07/08/2024

ಬಾಂಗ್ಲಾದೇಶದ ಪ್ರಧಾನಿ ಸ್ಥಾನಕ್ಕೆ ಶೇಖ್ ಹಸೀನಾ ರಾಜೀನಾಮೆ ನೀಡಿದ ಕೆಲವು ದಿನಗಳ ನಂತರ ಪ್ರತಿಪಕ್ಷ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ಮತ್ತು ಜಮಾತ್-ಎ-ಇಸ್ಲಾಮಿ ಮಧ್ಯಂತರ ಸರ್ಕಾರವನ್ನು ರಚಿಸಲು ಸಜ್ಜಾಗಿವೆ. ಇದು ಸಾಮಾಜಿಕ ಉದ್ಯಮಿ, ಬ್ಯಾಂಕರ್, ಅರ್ಥಶಾಸ್ತ್ರಜ್ಞ ಮತ್ತು ನಾಗರಿಕ ಸಮಾಜದ ಮುಖಂಡ ಮುಹಮ್ಮದ್ ಯೂನುಸ್ ಅವರ ಸಹಾಯ ಮತ್ತು ಸಲಹೆಯ ಮೇರೆಗೆ ಕಾರ್ಯನಿರ್ವಹಿಸುತ್ತದೆ. ಗ್ರಾಮೀಣ ಬ್ಯಾಂಕಿನ ಮಾಜಿ ಎಂಡಿ ಮಧ್ಯಂತರ ಸರ್ಕಾರದ ನೇತೃತ್ವ ವಹಿಸಲು ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.


Provided by

ಮುಹಮ್ಮದ್ ಯೂನುಸ್ ಅವರು ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರರಾಗಿ ಸೇವೆ ಸಲ್ಲಿಸಲಿದ್ದಾರೆ ಎಂದು ಬಂಗಭಬನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ತಾರತಮ್ಯ ವಿರೋಧಿ ಚಳವಳಿಯ ಪ್ರಮುಖ ಸಂಘಟಕರು ಮತ್ತು ಅಧ್ಯಕ್ಷ ಮುಹಮ್ಮದ್ ಶಹಾಬುದ್ದೀನ್ ನಡುವೆ ಮಧ್ಯಂತರ ಸರ್ಕಾರ ರಚನೆಯ ಸಭೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮೂರು ಸಶಸ್ತ್ರ ಪಡೆಗಳ ಮುಖ್ಯಸ್ಥರು ಸಹ ಸಭೆಯಲ್ಲಿ ಭಾಗವಹಿಸಿದ್ದರು.

ಪ್ರತಿಭಟನಾ ಪೀಡಿತ ರಾಷ್ಟ್ರದಲ್ಲಿ ಪರಿಸ್ಥಿತಿ ಸಾಮಾನ್ಯ ಸ್ಥಿತಿಗೆ ಮರಳಿದ ನಂತರ ಮೂರು ತಿಂಗಳ ನಂತರ ಬಾಂಗ್ಲಾದೇಶದಲ್ಲಿ ರಾಷ್ಟ್ರೀಯ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ಹಸೀನಾ ಅವರ ಅವಾಮಿ ಲೀಗ್ ಚುನಾವಣೆಯಲ್ಲಿ ಭಾಗವಹಿಸುತ್ತದೆಯೇ ಅಥವಾ ಮಧ್ಯಂತರ ಸರ್ಕಾರದಿಂದ ನಿಷೇಧಿಸಲ್ಪಡುತ್ತದೆಯೇ ಎಂಬುದು ಸ್ಪಷ್ಟವಾಗಿಲ್ಲ. ಹಸೀನಾ ನಿವೃತ್ತರಾಗುವ ಸಾಧ್ಯತೆ ಇರುವುದರಿಂದ, ಅವರ ನಂತರ ಅವಾಮಿ ಲೀಗ್ ಅನ್ನು ಯಾರು ಮುನ್ನಡೆಸುತ್ತಾರೆ ಎಂಬುದನ್ನು ನೋಡುವುದು ಮುಖ್ಯವಾಗಿದೆ.

ಬಿಎನ್‌ಪಿ ಇಂದು ಶಕ್ತಿ ಪ್ರದರ್ಶನ ರ್ಯಾಲಿಯನ್ನು ನಡೆಸಲಿದ್ದು, ಇದರಲ್ಲಿ ಮಾಜಿ ಪ್ರಧಾನಿ ಮತ್ತು ಪಕ್ಷದ ಮುಖ್ಯಸ್ಥೆ ಖಲೀದಾ ಜಿಯಾ ಅವರ ಪುತ್ರ ತಾರಿಕ್ ರೆಹಮಾನ್ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ.
ಹಸೀನಾ ಸರ್ಕಾರವು 2013 ರಲ್ಲಿ ಜಮಾತ್-ಎ-ಇಸ್ಲಾಮಿಯನ್ನು ನಿಷೇಧಿಸಿದ ನಂತರ, ಇಸ್ಲಾಮಿಕ್ ಪಕ್ಷವು ತನ್ನ ಸ್ಥಾನಮಾನವನ್ನು ಪುನರ್ ಸ್ಥಾಪಿಸುವ ಸಾಧ್ಯತೆ ಇದೆ ಮತ್ತು ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಭಾಗವಹಿಸಬಹುದು. 1975 ರಲ್ಲಿ ಸ್ಥಾಪನೆಯಾದ ಜಮಾತ್-ಎ-ಇಸ್ಲಾಮಿ ದೇಶದ ಅತಿದೊಡ್ಡ ಇಸ್ಲಾಮಿಕ್ ಪಕ್ಷಗಳಲ್ಲಿ ಒಂದಾಗಿದೆ. ಇದು ಈ ಹಿಂದೆ ಬಿಎನ್ ಪಿಯೊಂದಿಗೆ ಮೈತ್ರಿ ಮಾಡಿಕೊಂಡಿತ್ತು.

ಇನ್ನು ಪ್ರತಿಭಟನಾಕಾರರು ಹಿಂದೂ ಅಲ್ಪಸಂಖ್ಯಾತರ ಮೇಲೆ ದಾಳಿ ನಡೆಸುವುದಲ್ಲದೆ ಸರ್ಕಾರಿ ಆಸ್ತಿಗಳನ್ನು ನಾಶಪಡಿಸುವುದರೊಂದಿಗೆ ಬಾಂಗ್ಲಾದೇಶದಲ್ಲಿ ಅಶಾಂತಿ ಮುಂದುವರೆದಿದೆ. ಹಿಂಸಾಚಾರ ಪೀಡಿತರು ಭಾರತೀಯ ಭೂಪ್ರದೇಶವನ್ನು ಪ್ರವೇಶಿಸಲು ಭಾರತ-ಬಾಂಗ್ಲಾದೇಶ ಗಡಿಯ ಬಳಿ ಜಮಾಯಿಸುತ್ತಿದ್ದಾರೆ. ಗಡಿ ಭದ್ರತಾ ಪಡೆ ಹೆಚ್ಚಿನ ಎಚ್ಚರಿಕೆ ವಹಿಸಿದೆ ಮತ್ತು ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ನಂತರವೇ ಜನರನ್ನು ಒಳಗೆ ಬಿಡಲು ಆದೇಶಿಸಲಾಗಿದೆ.

ಹೆಚ್ಚುತ್ತಿರುವ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಶೇಖ್ ಹಸೀನಾ ಆಗಸ್ಟ್ 5 ರಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದರೊಂದಿಗೆ ಬಾಂಗ್ಲಾದೇಶವು ಅನಿಶ್ಚಿತ ರಾಜಕೀಯ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಸರ್ಕಾರಿ ಉದ್ಯೋಗಗಳಿಗೆ ಕೋಟಾ ವ್ಯವಸ್ಥೆಯನ್ನು ಕೊನೆಗೊಳಿಸಬೇಕೆಂದು ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳು ಮುಖ್ಯವಾಗಿ ಸರ್ಕಾರಿ ವಿರೋಧಿ ಪ್ರತಿಭಟನೆಗಳ ರೂಪವನ್ನು ಪಡೆದುಕೊಂಡಿದ್ದವು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ