ಬ್ಯಾಂಕ್ ಆಫ್ ಬರೋಡಾದಲ್ಲಿದೆ 500ಕ್ಕೂ ಹೆಚ್ಚು ಹುದ್ದೆಗಳು: ಅರ್ಜಿ ಸಲ್ಲಿಸೋದು ಹೇಗೆ? - Mahanayaka

ಬ್ಯಾಂಕ್ ಆಫ್ ಬರೋಡಾದಲ್ಲಿದೆ 500ಕ್ಕೂ ಹೆಚ್ಚು ಹುದ್ದೆಗಳು: ಅರ್ಜಿ ಸಲ್ಲಿಸೋದು ಹೇಗೆ?

bank of baroda
13/11/2024

ಭಾರತದ ಪ್ರಮುಖ ರಾಷ್ಟೀಕೃತ ಬ್ಯಾಂಕ್ ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾದಲ್ಲಿ 592 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಬಿಡುಗಡೆ ಮಾಡಿದ್ದು, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

Bank of Baroda Jobs 2024 : ಖಾಲಿ ಇರುವ ಹುದ್ದೆಗಳ ವಿವರಣೆ :

ಬ್ಯಾಂಕ್ ಆಫ್ ಬರೋಡಾದಲ್ಲಿ ಮ್ಯಾನೇಜರ್, ಎಐ ಇಂಜಿನಿಯರ್, ನ್ಯೂ ಏಜ್ ಮೊಬೈಲ್, ಡಿಜಿಟಲ್ ಫ್ರಾಢ ಸ್ಪೆಷಲಿಸ್ಟ್, ಪ್ರಾಜೆಕ್ಟ್ ಮ್ಯಾನೇಜರ್, ಫ್ಲೋರ್ ಮ್ಯಾನೇಜರ್, ವೆಂಡರ್ ಮ್ಯಾನೇಜರ್ ಸೇರಿದಂತೆ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು?

ಶೈಕ್ಷಣಿಕ ಅರ್ಹತೆಗಳನ್ನು ನೋಡುವುದಾದರೆ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು ಸಂಬಂಧಿತ ವಿಷಯದಲ್ಲಿ ಇಂಜಿನಿಯರಿಂಗ್ ಪದವಿ, ಸಿಎ, ಎಂಬಿಎ, ಎಂಸಿಎ, ಸಿಎಫ್ ಎ, ಪದವಿ ಮುಗಿಸಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ವಯೋಮಿತಿ ಅರ್ಹತೆಗಳನ್ನು ನೋಡುವುದಾದರೆ 20 ರಿಂದ 50 ವರ್ಷದ ವಯೋಮಿತಿಯುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿದೆ.

ನೇಮಕಾತಿ ಮಾಡಿಕೊಳ್ಳುತ್ತಿರುವ ಬ್ಯಾಂಕ್ ಶಾಖೆಗಳು :

ಮಂಡ್ಯ, ಪುತ್ತೂರು, ಕಲಬುರಗಿ, ಹಾಸನ, ಹುಬ್ಬಳ್ಳಿ, ಶಿವಮೊಗ್ಗ, ಮಂಗಳೂರು ಮತ್ತು ಉಡುಪಿ ಶಾಖೆಗಳಲ್ಲಿ ಈ ನೇಮಕಾತಿ ನಡೆಯುತ್ತಿದೆ.

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ — 19 ನವೆಂಬರ್ 2024

ಅರ್ಜಿ ಸಲ್ಲಿಕೆಗೆ ಅರ್ಜಿ ಶುಲ್ಕ :

* ಸಾಮಾನ್ಯ ವರ್ಗದವರು, ಆರ್ಥಿಕ ದುರ್ಬಲ ವರ್ಗದವರು ಹಾಗೂ ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು 600ರೂ. ಅರ್ಜಿ ಶುಲ್ಕ ಪಾವತಿಸಬೇಕು.

* ಪ. ಜಾತಿ, ಪ. ಪಂಗಡ, ಎಲ್ಲಾ ವರ್ಗದ ಮಹಿಳಾ ಅಭ್ಯರ್ಥಿಗಳು ಹಾಗೂ ಅಂಗವಿಕಲ ಅಭ್ಯರ್ಥಿಗಳು 100ರೂ. ಅರ್ಜಿ ಶುಲ್ಕ ಪಾವತಿಸಬೇಕು.

ಅರ್ಜಿ ಸಲ್ಲಿಕೆಗೆ ಲಿಂಕ್ :  www.bankofbaroda.in


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ