ಉಡುಪಿ : ಬನ್ನಂಜೆ ಕೆ.ಎಸ್. ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಸುಸಜ್ಜಿತ ಹೋಟೆಲ್ ವ್ಯವಸ್ಥೆಗಾಗಿ ಕರವೇ ಮನವಿ

ಉಡುಪಿ : ಅಕ್ಟೋಬರ್ :14 : ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿಯವರ ಸಾರಥ್ಯದಲ್ಲಿ ಉಡುಪಿಯ ಬನ್ನಂಜೆಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕೆ ಸುಸಜ್ಜಿತ ಹೋಟೆಲ್ ವ್ಯವಸ್ಥೆ ಇಲ್ಲದೆ ಹೊರಗಿನಿಂದ ತಂದಂತಹ ಆಹಾರವನ್ನು ಶೌಚಾಲಯದ ಹತ್ತಿರ ಪೂರೈಸುತ್ತಿದ್ದು, ಇದನ್ನು ನಿಲ್ಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಉಪಯೋಗಕ್ಕೆ ಎ. ಟಿ. ಎಂ. ತೆರೆಯುವಂತೆ ಜಿಲ್ಲಾಧಿಕಾರಿಯಾದ ಡಾ.ಕೆ. ವಿದ್ಯಾಕುಮಾರಿಯವರಿಗೆ ಮನವಿಯನ್ನು ಸಲ್ಲಿಸಲಾಯಿತು.
ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ ಹಲವು ವರುಷಗಳ ಮನವಿಗೆ ಸ್ಪಂದಿಸಿ, ಅಂಗಡಿ ಮುಂಗಟ್ಟುಗಳ ನಾಮಫಲಕದಲ್ಲಿ ಕನ್ನಡ ಕಡ್ಡಾಯಗೊಳಿಸುವಂತೆ ಸುತ್ತೋಲೆ ಹೋರಡಿಸಿದ್ದಕ್ಕೆ, ಜಿಲ್ಲಾಧಿಕಾರಿಗಳಿಗೆ ಹೂಗುಚ್ಛ ನೀಡಿ ಅಭಿನಂದಿಸಲಾಯಿತು.
ಈ ಸಂಧರ್ಭದಲ್ಲಿ ಕರವೇ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ. ಜಿಲ್ಲಾ ಗೌರವಾಧ್ಯಕ್ಷರಾದ ಸುಂದರ್ ಎ. ಬಂಗೇರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ರಾಘವೇಂದ್ರ ನಾಯಕ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ಗೀತಾ ಪಾಂಗಾಳ, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷರಾದ ಜಯ ಪೂಜಾರಿ, ಜಿಲ್ಲಾ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ಸಂತೋಷ ಕುಲಾಲ್, ಜಿಲ್ಲಾ ಯುವ ಘಟಕದ ಉಪಾಧ್ಯಕ್ಷರಾದ ರೋಷನ್ ಬಂಗೇರ, ಜಿಲ್ಲಾ ಮಹಿಳಾ ಘಟಕದ ಉಪಾಧ್ಯಕ್ಷರಾದ ದೇವಕಿ ಬಾರ್ಕೂರ್, ಜಿಲ್ಲಾ ಕಾರ್ಮಿಕ ಘಟಕದ ಉಪಾಧ್ಯಕ್ಷ ಸಿದ್ದಣ್ಣ ಎಸ್. ಪೂಜಾರಿ, ಮಹಿಳಾ ಕಾರ್ಯದರ್ಶಿಗಳಾದ ಅನುಷಾ ಆಚಾರ್ಯ ಪಳ್ಳಿ ಮತ್ತು ಸರಿತಾ, ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿ ಕೃಷ್ಣ ಪಾಂಗಾಳ, ಜಿಲ್ಲಾ ಮಹಿಳಾ ಸಂಘಟನಾ ಕಾರ್ಯದರ್ಶಿ ಜ್ಯೋತಿ, ಜಿಲ್ಲಾ ಮಹಿಳಾ ಸಹ ಸಾಂಸ್ಕೃತಿಕ ಕಾರ್ಯದರ್ಶಿಗಳಾದ ಜ್ಯೋತಿ ಆರ್ ಹಾಗೂ ಚಂದ್ರಕಲಾ ಉಪಸ್ಥಿತರಿದ್ದರು.