ಬನ್ನಂಜೆ ರಾಜ ಸಹಿತ 8 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋಕಾ ನ್ಯಾಯಾಲಯ - Mahanayaka
12:59 PM Tuesday 18 - November 2025

ಬನ್ನಂಜೆ ರಾಜ ಸಹಿತ 8 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋಕಾ ನ್ಯಾಯಾಲಯ

bannanj raja
04/04/2022

ಬೆಳಗಾವಿ: ಉತ್ತರಕನ್ನಡ ಜಿಲ್ಲೆ ಅಂಕೋಲಾದ ಉದ್ಯಮಿ, ಸಹಕಾರಿ ಮುಖಂಡ ಆರ್.ಎನ್. ನಾಯಕ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿದಂತೆ 8 ಮಂದಿಗೆ ಜೀವಾವಧಿ ಶಿಕ್ಷೆ ಹಾಗೂ ಮತ್ತೋರ್ವನಿಗೆ 5 ವರ್ಷ ಕಾರಾಗೃಹ ಶಿಕ್ಷೆಯನ್ನು ವಿಧಿಸಿ ಕೋಕಾ ನ್ಯಾಯಾಲಯ ಸೋಮವಾರ ತೀರ್ಪು ನೀಡಿದೆ.

ಬನ್ನಂಜೆ ರಾಜಾ  ನಾಯಕ ಅವರ ಬಳಿಯಲ್ಲಿ 3 ಕೋಟಿ ಹಫ್ತಾ ಕೇಳಿದ್ದು, ಹಫ್ತಾ ಕೊಡಲು ನಿರಾಕರಿಸಿದ್ದಕ್ಕೆ ಹತ್ಯೆ ನಡೆಸಿದ್ದ. ಇದು ರಾಜ್ಯದ ಮೊದಲ ಕೋಕಾ ಪ್ರಕರಣವಾಗಿತ್ತು.

ಪ್ರಧಾನ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶ ಸಿ.ಎಂ. ಜೋಶಿ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದರು.

ಇನ್ನೂ ಬನ್ನಂಜೆ ರಾಜಾ ಸೇರಿದಂತೆ ಅಪರಾಧಿಗಳಿಗೆ ಕೋಕಾ ನ್ಯಾಯಾಲಯದಿಂದ ಮರಣ ದಂಡನೆ ಶಿಕ್ಷೆ ವಿಧಿಸಬೇಕಿತ್ತು. ಆದರೆ, ಜೀವಾವಧಿ ಶಿಕ್ಷೆಯಾಗಿದೆ. ಇದನ್ನು ಪ್ರಶ್ನಿಸಿ ಹೈಕೋರ್ಟ್ ಗೆ  ಮೇಲ್ಮನವಿ ಸಲ್ಲಿಸಲಾಗುವುದು ಎಂದು ವಿಶೇಷ ಸರ್ಕಾರಿ ಅಭಿಯೋಜಕ ಕೆ.ಜಿ.ಪುರಾಣಿಕ ಮಠ ಹೇಳಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ರಾಜಕೀಯ ಅಸ್ಥಿರತೆ; ಶ್ರೀಲಂಕಾ ಪ್ರಧಾನಿ ರಾಜೀನಾಮೆ

ಮತ್ತೆ ಪೆಟ್ರೋಲ್ ಡಿಸೇಲ್ ಬೆಲೆಯೆರಿಕೆ

ಕೈಗಳನ್ನು ಕಟ್ಟಿದ ಸ್ಥಿತಿಯಲ್ಲಿ ಮಹಿಳೆಯರ ಬೆತ್ತಲೆ ಮೃತದೇಹ ಪತ್ತೆ: ರಷ್ಯಾ ಸೈನಿಕರ ಕ್ರೂರತೆ ಎಂದ ಉಕ್ರೇನ್

ಬಾಲಕಿಯನ್ನು ಪ್ರೀತಿಸುವ ನಾಟಕವಾಡಿ ಲೈಂಗಿಕ ದೌರ್ಜನ್ಯ: ಲೈಟ್ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ

ಇತ್ತೀಚಿನ ಸುದ್ದಿ