ಬಂಟ್ವಾಳ: ಯುವಕನಿಗೆ ಚಾಕುವಿನಿಂದ ಇರಿದ ನಾಲ್ವರ ತಂಡ!

16/05/2025
ಬಂಟ್ವಾಳ : ಪಾಣೆಮಂಗಳೂರು ಸಮೀಪದ ಅಕ್ಕರಂಗಡಿ ಬಸ್ಸು ನಿಲ್ದಾಣ ಬಳಿ ಯುವಕನೊಬ್ಬನಿಗೆ ತಂಡವೊಂದು ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ವೃತ್ತಿಯಲ್ಲಿ ಪೈಂಟರ್ ಆಗಿರುವ ಹಮೀದ್ ಯಾನೆ ಅಮ್ಮಿ ಎಂಬ ಯುವಕ ಚೂರಿ ಇರಿತಕ್ಕೊಳಗಾದವರಾಗಿದ್ದಾರೆ. ಚೂರಿ ಇರಿತದ ಪರಿಣಾಮ ಹಮೀದ್ ನ ಕೈಗೆ ಗಂಭೀರ ಗಾಯವಾಗಿದೆ. ಅವರನ್ನು ಸ್ಥಳೀಯರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೃತ್ಯ ನಡೆಸಿದ ದುಷ್ಕರ್ಮಿಗಳ ಪತ್ತೆಗೆ ಶೋಧ ನಡೆಸುತ್ತಿದ್ದಾರೆ. ಹಲ್ಲೆಗೆ ಕಾರಣ ಏನು ಮತ್ತು ಹಲ್ಲೆ ನಡೆಸಿದವರು ಯಾರು ಎನ್ನುವ ಮಾಹಿತಿ ಇನ್ನೂ ಲಭ್ಯವಾಗಿಲ್ಲ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD