ಬಂಟ್ವಾಳ: ಕಂದಕಕ್ಕೆ ಉರುಳಿದ ಲಾರಿ: ಒಬ್ಬ ಕಾರ್ಮಿಕನ ದಾರುಣ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ - Mahanayaka
10:36 AM Saturday 23 - August 2025

ಬಂಟ್ವಾಳ: ಕಂದಕಕ್ಕೆ ಉರುಳಿದ ಲಾರಿ: ಒಬ್ಬ ಕಾರ್ಮಿಕನ ದಾರುಣ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ

bantwal
30/05/2025


Provided by

ಬಂಟ್ವಾಳ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ ಒಬ್ಬ ಕಾರ್ಮಿಕ ದಾರುಣವಾಗಿ ಸಾವನ್ನಪ್ಪಿ, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ.

ಜಾರ್ಖಂಡ್ ಮೂಲದ ಕಾರ್ಮಿಕ ನಿರ್ಮಲಾ ಅನ್ಸಾತ್(32) ಮೃತಪಟ್ಟ ಕಾರ್ಮಿಕನಾಗಿದ್ದು, ಆದರ್ಶ್ ಗಂಭೀರವಾಗಿ ಗಾಯಗೊಂಡ ಇನ್ನೊಬ್ಬ ಕಾರ್ಮಿಕನಾಗಿದ್ದಾನೆ. ಇವರಿಬ್ಬರೂ ಲಾರಿಯ ಹಿಂಬದಿಯಲ್ಲಿ  ಅಕ್ಕಿ ಲೋಡ್ ಮೇಲೆ ಕುಳಿತುಕೊಂಡಿದ್ದರು. ಲಾರಿ ಕಂದಕಕ್ಕೆ ಉರುಳಿದ ವೇಳೆ ರಸ್ತೆಗೆಸೆಯಲ್ಪಟ್ಟು  ಈ ಘಟನೆ ಸಂಭವಿಸಿದೆ. ಗಾಯಾಳುವನ್ನು ಮಂಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದಲ್ಲಿ ಲಾರಿ ಚಾಲಕ ಸುಜಿತ್ ಹಾಗೂ ಕ್ಲೀನರ್ ಸಿಮೋಹನ್ ಮುರ್ಮ ಅಪಾಯದಿಂದ ಪಾರಾಗಿದ್ದಾರೆ. ಉಡುಪಿಯಿಂದ ಅಕ್ಕಿ ಲೋಡ್ ಮಾಡಿಕೊಂಡು ಈ ವಾಹನ ಬಂಟ್ವಾಳ ಮೂಲಕ ಸಾಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ