ಬಾನು ಮುಷ್ತಾಕ್ ದಸರಾ ಉದ್ಘಾಟನೆ ವಿಚಾರ: ಪ್ರತಾಪ್ ಸಿಂಹಗೆ ಹೈಕೋರ್ಟ್ ನಲ್ಲಿ ಮುಖಭಂಗ

ಬೆಂಗಳೂರು: ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವುದನ್ನು ವಿರೋಧಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಮೂವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದೆ.
ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟಿಸಬಾರದು ಎಂದು ಪ್ರತಾಪ್ ಸಿಂಹ, ಟಿ. ಗಿರೀಶ್ ಕುಮಾರ್ ಹಾಗೂ ಹೆಚ್. ಎಸ್. ಗೌರವ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಾಧೀಶರಾದ ಸಿ. ಎಂ. ಜೋಶಿ ಅವರಿದ್ದ ನ್ಯಾಯಪೀಠ, ಅರ್ಜಿಗಳನ್ನು ವಜಾಗೊಳಿಸಿ ಸೋಮವಾರ ಆದೇಶ ಪ್ರಕಟಿಸಿದೆ.
ದಂಡ ವಿಧಿಸಬೇಕು ಎಂಬ ಎಜಿ ಶಶಿಕಿರಣ್ ಶೆಟ್ಟಿ ಮನವಿಯನ್ನು ನ್ಯಾಯಪೀಠ ನಿರಾಕರಿಸಿತು. ವಿಜಯದಶಮಿ ಎಂದರೆ ಕೆಟ್ಟದ್ದರ ವಿರುದ್ಧ ಗೆಲುವಿನ ಎಂಬ ಅರ್ಥದಲ್ಲಿ ದೇಶಾದ್ಯಂತ ಈ ಹಬ್ಬವನ್ನು ಆಚರಿಸಲಾಗುತ್ತದೆ. ಇದರಲ್ಲಿ ಧರ್ಮ ತೂರಿಸುವುದು ಸರಿಯಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿರುವುದಾಗಿ ತಿಳಿದುಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD