ಬಾನು ಮುಷ್ತಾಕ್ ರಿಂದ ದಸರಾ ಉದ್ಘಾಟನೆ: ಯತ್ನಾಳ್  ಆಕ್ಷೇಪ - Mahanayaka

ಬಾನು ಮುಷ್ತಾಕ್ ರಿಂದ ದಸರಾ ಉದ್ಘಾಟನೆ: ಯತ್ನಾಳ್  ಆಕ್ಷೇಪ

yathnal
24/08/2025


Provided by

ಬೆಂಗಳೂರು: ಕನ್ನಡದ ಹೆಮ್ಮೆಯ ಸಾಹಿತಿ ಬಾನು ಮುಷ್ತಾಕ್ ಅವರು ನಾಡ ಹಬ್ಬ  ಮೈಸೂರು ದಸರಾವನ್ನು ಉದ್ಘಾಟಿಸುವುದಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ ಎತ್ತಿದ್ದಾರೆ.

ಈ ಬಗ್ಗೆ ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಬರೆದುಕೊಂಡಿದ್ದು, ನಾನು ವೈಯಕ್ತಿಕವಾಗಿ ಶ್ರೀಮತಿ ಭಾನು ಮುಶ್ತಾಕ್ ಅವರನ್ನು ಲೇಖಕಿ ಹಾಗೂ ಹೋರಾಟಗಾರ್ತಿಯಾಗಿ ಗೌರವಿಸುತ್ತೇನೆ. ಆದರೆ, ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ  ಸಲ್ಲಿಸಿ ದೀಪ ಬೆಳಗುವುದರ ಮೂಲಕ ದಸರಾವನ್ನು ಉದ್ಘಾಟಿಸುವುದು, ಅವರ ಸ್ವಂತ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾಗಿದೆ ಎಂದು ಟೀಕಿಸಿದ್ದಾರೆ.

ಇಸ್ಲಾಂ ಮೂರ್ತಿ ಪೂಜೆಯನ್ನು ಧಿಕ್ಕರಿಸಿ ಒಂದು ದೇವರು ಹಾಗೂ ಒಂದು ಗ್ರಂಥವನ್ನೇ ಒಪ್ಪಿಕೊಳ್ಳುತ್ತದೆ ಎಂಬ ನಂಬಿಕೆಯಲ್ಲಿ ಅವರು ಇನ್ನೂ ಇದ್ದಾರೆಯೇ, ಅಥವಾ ಎಲ್ಲಾ ಮಾರ್ಗಗಳೂ ಅಂತಿಮವಾಗಿ ಒಂದೇ ಮೋಕ್ಷಕ್ಕೆ ದಾರಿ ಮಾಡಿಕೊಡುತ್ತವೆ ಎಂದು ಅವರು ನಂಬುತ್ತಾರೆಯೇ ಎಂಬುದರ ಬಗ್ಗೆ  ಶ್ರೀಮತಿ ಭಾನು ಮುಶ್ತಾಕ್ ಅವರು  ಸ್ಪಷ್ಟನೆ ನೀಡುವುದು ಅಗತ್ಯ ಎಂದು ಯತ್ನಾಳ್ ಪ್ರಶ್ನಿಸಿದ್ದಾರೆ.

ಈ ಸ್ಪಷ್ಟತೆ ಇಲ್ಲದೆ, ದಸರಾ ಉದ್ಘಾಟಿಸುವುದು ಸರಿಯಲ್ಲ. ಆದರೆ, ದಸರಾ ಉತ್ಸವದ ಅಂಗವಾಗಿ ನಡೆಯುವ ಸಾಂಸ್ಕೃತಿಕ ಅಥವಾ ಕವಿಗೋಷ್ಠಿಯಂತಹ ಸಾಹಿತ್ಯ  ಕಾರ್ಯಕ್ರಮಗಳನ್ನು ಉದ್ಘಾಟಿಸುವ ಅತಿಥಿಯಾಗಿ ಅವರು ಭಾಗವಹಿಸುವುದು ತಕ್ಕದ್ದಾಗಿದೆ ಅಂತ ಹೇಳಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ