ಹೆಂಡತಿಯ ದುಡ್ಡಿನ ದುರಾಸೆಯಿಂದ ಬೇಸತ್ತು ಬಾರ್ ಕ್ಯಾಶಿಯರ್ ಆತ್ಮಹತ್ಯೆ
ಹೆಂಡತಿಯ ದುಡ್ಡಿನ ದುರಾಸೆಯಿಂದ ಬೇಸತ್ತು ಪತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಶ್ರೀನಗರ ಬಳಿಯ ಅವಲಹಳ್ಳಿಯಲ್ಲಿ ನಡೆದಿದೆ.
ಮಂಡ್ಯದ ನಾಗಮಂಗಲ ಮೂಲದ ಅಣ್ಣಯ್ಯ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಬೆಂಗಳೂರಿನ ಬಾರ್ ನಲ್ಲಿ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದ ಅಣ್ಣಯ್ಯ ಮತ್ತು ಉಮಾ 5 ವರ್ಷಗಳ ಹಿಂದೆ ಮದುವೆಯಾಗಿದ್ದರು. ಮದುವೆ ಬಳಿಕ ಹಣದ ವಿಷಯದಲ್ಲಿ ಗಂಡ-ಹೆಂಡತಿ ನಡುವೆ ಪದೇಪದೆ ಜಗಳ ಆಗುತ್ತಿತ್ತು ಎನ್ನಲಾಗಿದೆ.
ನನ್ನ ಹೆಂಡತಿ ದುಡ್ಡು ದುಡ್ಡು ಎನ್ನುತ್ತಾಳೆ. ಎಷ್ಟು ದುಡ್ಡಿದ್ದರೂ ಆಕೆಗೆ ಸಾಕಾಗುತ್ತಿಲ್ಲ. ಹೀಗಾಗಿ ನನಗೆ ಜೀವನದಲ್ಲಿ ನೆಮ್ಮದಿಯೇ ಇಲ್ಲದಂತೆ ಆಗಿದೆ. ನನ್ನ ಸಾವಿಗೆ ನಾನೇ ಕಾರಣ ಅಂತಾ ಅಣ್ಣಯ್ಯ ಡೆತ್ ನೋಟು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka