ಬಾರ್ ಸಿಬ್ಬಂದಿಯನ್ನು ಬಿಯರ್ ಬಾಟಲಿಯಿಂದ ಇರಿದು ಬರ್ಬರ ಹತ್ಯೆ: ಕುಡುಕ ಅರೆಸ್ಟ್

ಮಡಿಕೇರಿ: ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ಬಾರ್ ಸಿಬ್ಬಂದಿಯನ್ನು ಬಿಯರ್ ಬಾಟಲಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ನಡೆದಿದೆ.
ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ಕುಶಾಲನಗರದಲ್ಲಿರುವ ಬಾರ್ ನಲ್ಲಿ ಈ ಘಟನೆ ನಡೆದಿದ್ದು, ಜನತಾ ಕಾಲೋನಿಯ ಹರ್ಷ ಎಂಬಾತ ಬಾರ್ ಸಿಬ್ಬಂದಿ ಸಂತೋಷ್ ಎಂಬವರನ್ನು ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.
ಕುಡಿತದ ಅಮಲಿನಲ್ಲಿದ್ದ ಹರ್ಷ, ಸಂತೋಷ್ ಜೊತೆಗೆ ವಾಗ್ವಾದ ನಡೆಸಿದ್ದನು. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ವೇಳೆ, ಕೋಪಗೊಂಡ ಹರ್ಷ ಬಿಯರ್ ಬಾಟಲಿಯಿಂದ ಸಂತೋಷ್ ನ ತಲೆ ಹಾಗೂ ಕುತ್ತಿಗೆಗೆ ಬಲವಾಗಿ ಇರಿದಿದ್ದು, ಪರಿಣಾಮವಾಗಿ ತೀವ್ರ ರಕ್ತ ಸ್ರಾವಗೊಂಡು ಸಂತೋಷ್ ಸಾವನ್ನಪ್ಪಿದ್ದಾನೆ.
ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಕುಶಾಲನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth