5:02 AM Friday 12 - September 2025

ವೈದ್ಯರು ಚುಚ್ಚುಮದ್ದು ನೀಡಿದ ಬೆನ್ನಲ್ಲೇ ಬಾಣಂತಿ ಸಾವು!

05/03/2024

ಕೋಲಾರ: ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

ಕೋಲಾರ ತಾಲೂಕಿನ ಜಂಗಾಲಹಳ್ಳಿಯ ನಿವಾಸಿ ಭವಾನಿ(26) ಮೃತಪಟ್ಟವರಾಗಿದ್ದಾರೆ. ಸೋಮವಾರ ಬೆಳಗ್ಗೆ ಹೆರಿಗೆಗೆಂದು ಆಸ್ಪತ್ರೆಗೆ ಭವಾನಿ ದಾಖಲಾಗಿದ್ದರು. ಸಂಜೆ ವೇಳೆಗೆ ಆಕೆ ಹೆಣ್ಣುಮಗುವಿಗೆ ಜನ್ಮ ನೀಡಿದ್ದರು.

ಆದರೆ, ಮಧ್ಯರಾತ್ರಿ ಬಾಣಂತಿ ತೀವ್ರ ನೋವಾಗುತ್ತಿರುವ ಬಗ್ಗೆ ವೈದ್ಯರ ಬಳಿ ಹೇಳಿದ್ದಾರೆ. ಈ ಹಿನ್ನಲೆಯಲ್ಲಿ ವೈದ್ಯರು ಇಂಜೆಕ್ಷನ್ ನೀಡಿದ್ದಾರೆ. ಇಂಜೆಕ್ಷನ್ ನೀಡಿದ ಕೂಡಲೇ ಮಹಿಳೆಯ ತೀವ್ರ ಅಸ್ವಸ್ಥರಾಗಿ ಸಾವಿಗೀಡಾಗಿದ್ದಾರೆ.

ವೈದ್ಯರು ನೀಡಿದ ಇಂಜೆಕ್ಷನ್ ನಿಂದ ಬಾಣಂತಿ ಭವಾನಿ ಕೊನೆಯುಸಿರೆಳೆದಿದ್ದಾರೆ ಎಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ. ವೈದ್ಯೆ ಡಾ.ಶಾಂತಾ ವಿರುದ್ಧ ಕೋಲಾರ ಟೌನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನನ್ನ ಪತ್ನಿ ಸಾವಿಗೆ ನ್ಯಾಯ ಬೇಕು ಎಂದು ಭವಾನಿಯ ಪತಿ ಗೋಪಾಲ್ ಹಾಗೂ ಮೃತಳ ಕುಟುಂಬಸ್ಥರು ಆಗ್ರಹಿಸಿದರು.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version