ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಬಲಿ: ಲಕ್ಷ ಲಕ್ಷ ಬಿಲ್ ಕಟ್ಟಿದರೂ ಉಳಿಯಲಿಲ್ಲ ಜೀವ!
ಯಾದಗಿರಿ: ಸರ್ಕಾರಿ ಆಸ್ಪತ್ರೆ ವೈದ್ಯರ ಯಡವಟ್ಟಿಗೆ ಬಾಣಂತಿಯೊಬ್ಬರು ಬಲಿಯಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ್ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ.
ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ಭವಾನಿ ಮೃತಪಟ್ಟ ಬಾಣಂತಿ ಎಂದು ತಿಳಿದು ಬಂದಿದೆ. ಕುಟುಂಬಸ್ಥರು ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಆಸ್ಪತ್ರೆ ವೈದ್ಯೆ ಸರೋಜಾ ಪಾಟೀಲ ರಕ್ತ ತಪಾಸಣೆಗೆ ಕೊಟ್ಟಿದ್ದು, ವರದಿ ಬರುವ ಮೊದಲೇ ಸಿಜೇರಿಯನ್ ಮೂಲಕ ಹೆರಿಗೆ ಮಾಡಿಸಿದ್ದರು ಎನ್ನಲಾಗಿದೆ.
ಸಿಜೇರಿಯನ್ ನಂತರ ಬ್ಲಡ್ ರಿಪೋರ್ಟ್ ಬಂದಿತ್ತು. ಈ ವೇಳೆ ಬಾಣಂತಿಗೆ ಕಾಮಾಲೆ ಇರುವುದು ಪತ್ತೆಯಾಗಿತ್ತು. ಹೆರಿಯಾಗಿ, ಒಂದು ಗಂಟೆಯ ಬಳಿಕ ತೀವ್ರ ರಕ್ತಸ್ರಾವದಿಂದ ಬಾಣಂತಿ ಅಸ್ವಸ್ಥಗೊಂಡಿದ್ದಾರೆ. ಈ ವೇಳೆ ವೈದ್ಯೆ ಬಾಣಂತಿಯನ್ನು ತಕ್ಷಣವೇ ಕಲಬುರಗಿ ಯುನೈಟೆಡ್ ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದ್ದು, ತಾನಾಗಿಯೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಯುನೈಟೆಡ್ ಆಸ್ಪತ್ರೆಯ ವೈದ್ಯರು ಆಪರೇಷನ್ ಪೇಲ್ ಆಗಿದೆ ಮತ್ತೊಮ್ಮೆ ಆಪರೇಷನ್ ಮಾಡಬೇಕೆಂದು ಸೂಚಿಸಿದ್ದಾರೆ. ಬಳಿಕ ಆಪರೇಷನ್ ಮುಗಿಯುವ ತನಕ ವೈದ್ಯೆ ಸರೋಜಾ ಪಾಟೀಲ ಅಲ್ಲಿಯೇ ಇದ್ದರು. ಆಪರೇಷನ್ ಬಳಿಕ 10 ಲಕ್ಷ ರೂ. ಬಿಲ್ ಮಾಡಿದ್ದಾರೆ ಎಂದು ಹೇಳಲಾಗಿದೆ.
ಬಿಲ್ ಪಾವತಿಸಿದರೂ ಬಾಣಂತಿ ಚೇತರಿಕೆಯಾಗಿರಲಿಲ್ಲ. ಬಳಿಕ ಮಹಾರಾಷ್ಟ್ರದ ಸೊಲ್ಲಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅ.13ರಂದು ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಕಾರಣ ಶಹಾಪುರ ತಾಲೂಕಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ನಸುಕಿನ ಜಾವ ಚಿಕಿತ್ಸೆ ಫಲಕಾರಿಯಾಗದೇ ಬಾಣಂತಿ ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ವೈದ್ಯೆ ಸರೋಜಾ ಪಾಟೀಲ ವಿರುದ್ಧ ಮೃತ ಭವಾನಿ ಕುಟುಂಬಸ್ಥರು ಕ್ರಮಕ್ಕೆ ಒತ್ತಾಯಿಸಿದ್ದಾರೆ. ಅವರನ್ನು ತಕ್ಷಣವೇ ಸಸ್ಪೆಂಡ್ ಮಾಡಿ, ಆಸ್ಪತ್ರೆ ಬಿಲ್ ಪಾವತಿಸುವಂತೆ ಒತ್ತಾಯಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: