ಹಾಡ ಹಗಲೇ ರೌಡಿಶೀಟರ್ ಮೇಲೆ ಗುಂಡಿನ ದಾಳಿ ನಡೆಸಿ ಬರ್ಬರ ಹತ್ಯೆ!
ವಿಜಯಪುರ: ಹಾಡಹಗಲೇ ರೌಡಿಶೀಟರ್ ವೋಬ್ಬನನ್ನು ಗುಂಡಿನ ದಾಳಿ ನಡೆಸಿ ಬರ್ಬರವಾಗಿ ಹತ್ಯೆ ನಡೆಸಿದ ಘಟನೆ ಶನಿವಾರ ನಗರದ ವಜ್ರಹನುಮಾನ ಪ್ರದೇಶದ ಚಾಂದಪೂರ ಕಾಲೋನಿ ಪ್ರದೇಶದಲ್ಲಿ ಬೆಳಿಗ್ಗೆ 10 ಗಂಟೆ ಸುಮಾರಿಗೆ ನಡೆದಿದೆ.
ಪಾಲಿಕೆ ಸದಸ್ಯೆಯ ಪತಿ, ರೌಡಿಶೀಟರ್ ಹೈದರ್ ನದಾಫ್ ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಎದೆ ಹಾಗೂ ಹಣೆಗೆ ಗುಂಡುಗಳು ತಗುಲಿದ್ದು, ಆರು ಗುಂಡುಗಳು ದೇಹ ಹೊಕ್ಕಿದ ಪರಿಣಾಮ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹೈದರ್ ಪತ್ನಿ ನಿಶಾತ್ ವಿಜಯಪುರ ಮಹಾನಗರ ಪಾಲಿಕೆಯಲ್ಲಿ ವಾರ್ಡ್ ನಂಬರ್ 19ರ ಎಂಐಎಂ ಪಕ್ಷದ ಸದಸ್ಯೆಯಾಗಿದ್ದಾರೆ. ಪಾಲಿಕೆ ಚುನಾವಣಾ ದ್ವೇಷ ಹಾಗೂ ಹೈದರ್ ಮೇಲಿನ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಹತ್ಯೆ ನಡೆದಿದೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ತನಿಖೆಯ ಬಳಿಕ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























