ಬಹಿರ್ದೆಸೆಗೆ ತೆರಳಿದ ವ್ಯಕ್ತಿಯ ಬರ್ಬರ ಹತ್ಯೆ: ಯುಗಾದಿ ಅಮಾವಾಸ್ಯೆ ದಿನವೇ ಕೃತ್ಯ!

08/04/2024
ಯಾದಗಿರಿ: ಬಹಿರ್ದೆಸೆಗೆ ತೆರಳಿದ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಸುರಪುರ ತಾಲೂಕಿನ ಏವೂರು ಗ್ರಾಮದಲ್ಲಿ ನಡೆದಿದೆ.
ಏವೂರು ಗ್ರಾಮದ ನಿವಾಸಿ ಬಂದೇನವಾಜ್ (40) ಹತ್ಯೆಗೀಡಾದ ವ್ಯಕ್ತಿಯಾಗಿದ್ದಾರೆ. ಇಂದು ನಸುಕಿನ ಜಾವ ಗ್ರಾಮದ ಹೊರಗೆ ಬಹಿರ್ದೆಸೆಗೆ ಹೋಗಿದ್ದ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ.
ಯುಗಾದಿ ಅಮಾವಾಸ್ಯೆ ದಿನವೇ ವ್ಯಕ್ತಿಯನ್ನು ನಸುಕಿನ ಜಾವ ಬರ್ಬರವಾಗಿ ಹತ್ಯೆ ಮಾಡಿರುವುದು ಹಲವು ಅನುಮಾನಗಳಿಗೂ ಕಾರಣವಾಗಿದೆ.
ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಎಸ್.ಪಿ. ಜಿ. ಸಂಗೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಂಬಾವಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth