12:35 AM Saturday 25 - October 2025

ಕೇಂದ್ರ ಸರಕಾರದಿಂದ ನಾಡದೋಣಿ ಮೀನುಗಾರಿಕೆ 1488 ಕೆ ಎಲ್ ಸೀಮೆಎಣ್ಣೆ ಬಿಡುಗಡೆ : ಯಶ್ ಪಾಲ್ ಸುವರ್ಣ ಅಭಿನಂದನೆ

yashpal
26/04/2023

ಕರಾವಳಿ ಜಿಲ್ಲೆಗಳ ನಾಡದೋಣಿ ಮೀನುಗಾರರ ಮನವಿಗೆ ಸ್ಪಂದಿಸಿ 1488 ಕಿಲೋ ಲೀಟರ್ ಬಿಡುಗಡೆ ಮಾಡಿದ ಕೇಂದ್ರ ಸರಕಾರಕ್ಕೆ ಸಮಸ್ತ ಮೀನುಗಾರರ ಪರವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ ಅಭಿನಂದನೆ ಸಲ್ಲಿಸಿದ್ದಾರೆ.

ಮೀನುಗಾರಿಕೆ ಇಲಾಖೆ ಕಳೆದ ಸಾಲಿನಲ್ಲಿ ನಾಡದೋಣಿ ಮೀನುಗಾರಿಕೆಗೆ ಸೀಮೆಎಣ್ಣೆಯನ್ನು 150 ಲೀಟರ್ ನಿಂದ 300 ಲೀಟರ್ ಗೆ ಹೆಚ್ಚಿಸಲು ಸಮ್ಮತಿಸಿದ್ದು, ಇದೀಗ ಕೇಂದ್ರ ಸರಕಾರ ಸೀಮೆ ಎಣ್ಣೆಯನ್ನು ಬಿಡುಗಡೆಗೊಳಿಸುವ ಮೂಲಕ ನಾಡದೋಣಿ ಮೀನುಗಾರಿಕೆಗೆ ಸಹಕಾರ ನೀಡಿದೆ.

ಕೇಂದ್ರ ಸರಕಾರದ ಮೂಲಕ ಸೀಮೆಎಣ್ಣೆ ಬಿಡುಗಡೆಗೆ ವಿಶೇಷ

ಮುತುವರ್ಜಿ ವಹಿಸಿದ ಕೇಂದ್ರ ಪೆಟ್ರೋಲಿಯಂ ಸಚಿವರಾದ ಶ್ರೀ ಹರ್ದೀಪ್ ಸಿಂಗ್ ಪುರಿ, ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್, ಸಂಸದರಾದ ಬಿ. ವೈ ರಾಘವೇಂದ್ರ ಹಾಗೂ ಕರಾವಳಿ ಜಿಲ್ಲೆಯ ಎಲ್ಲಾ ಶಾಸಕರಿಗೆ ಮೀನುಗಾರರ ಪರವಾಗಿ ಧನ್ಯವಾದ ಸಲ್ಲಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version