ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಸಿಡಿ ಬಿಡುಗಡೆಗೆ ಕ್ಷಣಗಣನೆ ಎಂಬ ಫೋಟೋ ವೈರಲ್: ದೂರು ದಾಖಲು - Mahanayaka
9:18 AM Wednesday 20 - August 2025

ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಸಿಡಿ ಬಿಡುಗಡೆಗೆ ಕ್ಷಣಗಣನೆ ಎಂಬ ಫೋಟೋ ವೈರಲ್: ದೂರು ದಾಖಲು

yathnal
14/10/2021


Provided by

ವಿಜಯಪುರ: “ಹಿಂದೂ ಹುಲಿಯ ಸಿಡಿ ಬಿಡುಗಡೆಗೆ ಕ್ಷಣ ಗಣನೆ” ಎಂಬ ಕ್ಯಾಪ್ಷನ್ ನಲ್ಲಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರದ್ದೆನ್ನಲಾಗಿರುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಸಂಬಂಧ ವಿಜಯಪುರ ನಗರದ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬಿಜೆಪಿಯ ಹಿಂದೂ ಹುಲಿಯ ಸಿಡಿ ಬಿಡುಗಡೆಗೆ ಕ್ಷಣಗಣನೆ. ಭರ್ಜರಿ ಯಶಸ್ಸು ಕಾಣಲಿ ಎಂದು ಆಶಿಸುವೆ’ ಎಂದು ಬರೆಯಲಾದ ಫೋಟೋ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಂತಹ ಫೋಟೋ ಹರಿಬಿಡುವ ಮೂಲಕ ಯತ್ನಾಳ್ ಅವರಿಗೆ ಅವಮಾನ ಮಾಡಲಾಗುತ್ತಿದೆ ಎಂದು ಅವರ ಬೆಂಬಲಿಗ ಲಕ್ಷ್ಮಣ ಜಾಧವ್ ಎಂಬವರು ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ನಮ್ಮ ಕಾಂಗ್ರೆಸ್ ಇನ್ಸ್ಟಾಗ್ರಾಂ ಖಾತೆಯಲ್ಲಿ ಫೋಟೋ ಕಾಣಿಸಿಕೊಂಡಿದೆ. ಇದಲ್ಲದೆ ಜೆಡಿಎಸ್ ಮಿಷನ್ 2023 ಎಂಬ ಫೇಸ್ಬುಕ್ ಖಾತೆಯಲ್ಲಿಯೂ ಫೋಟೋ ಹರಿದಾಡಿದೆ ಎಂದು ಹೇಳಲಾಗಿದ್ದು, ಶಾಸಕರ ಬೆಂಬಲಿಗ ಜಾಧವ್ ದೂರು ನೀಡಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

 ಇನ್ನಷ್ಟು ಸುದ್ದಿಗಳು…

ನೈತಿಕತೆ ಇಲ್ಲದಾಗ ಆಕ್ಷನ್ಸ್, ರಿಯಾಕ್ಷನ್ಸ್ ಆಗುತ್ತೆ | ಅನೈತಿಕ ಪೊಲೀಸ್ ಗಿರಿ ಬಗ್ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

ಬಿಜೆಪಿಯ ಭ್ರಷ್ಟಾಚಾರವನ್ನು ಶಾಸಕರೊಬ್ಬರು ಮಂಚದ ಮೇಲೆಯೂ ಕನವರಿಸಿದ್ದರು | ಬಿಜೆಪಿಗೆ ಕಾಂಗ್ರೆಸ್ ತಿರುಗೇಟು

ದಸರ ಮುಗಿದ ತಕ್ಷಣ ಪೂರ್ಣ ಪ್ರಮಾಣದಲ್ಲಿ ಶಾಲೆ ಆರಂಭ: ಶಿಕ್ಷಕರಿಗೆ ಸರ್ಕಾರ ನೀಡಿದ ಆದೇಶ ಏನು?

ಸಿಬಿಐ ದಾಳಿ ರಾಜಕೀಯ ಪ್ರೇರಿತ ಎಂದವರಿಗೆ ಅವರದ್ದೇ ಪಕ್ಷದವರು ಸಾಕ್ಷ್ಯ ನೀಡಿದ್ದಾರೆ | ನಳಿನ್ ಕುಮಾರ್ ಕಟೀಲ್

“ಸಾವರ್ಕರ್ ರಾಷ್ಟ್ರಪಿತ” ಎಂದು ಬಿಜೆಪಿ ಶೀಘ್ರದಲ್ಲೇ ಘೋಷಿಸುತ್ತದೆ: ಓವೈಸಿ ಹೇಳಿಕೆ

ಕಲೆಕ್ಷನ್ ಪಾರ್ಟಿ: ಸಲೀಂ-ಉಗ್ರಪ್ಪ ಆರೋಪಕ್ಕೆ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ಏನು ಗೊತ್ತಾ?

ಕರಂಗೋಲು ಕುಣಿತ: ಅದರ ಸಾಮಾಜಿಕ ಮತ್ತು ಅಲೌಕಿಕ ನೆಲೆಗಳು

ಇತ್ತೀಚಿನ ಸುದ್ದಿ