ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ: ವಿಡಿಯೋ ಕಾಲ್ ನಲ್ಲಿರುವ ನಿಗೂಢ ಮಹಿಳೆಗಾಗಿ ಹುಡುಕಾಟ
ಬೆಂಗಳೂರು: ಮಾಗಡಿ ತಾಲೂಕಿನ ಕಂಚುಗಲ್ ಬಂಡೆಮಠದ 45 ವರ್ಷದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆಗೆ ಪ್ರಚೋದನೆ ಕುರಿತ ತನಿಖೆ ಚುರುಕುಗೊಂಡಿದೆ.
ಮಹಿಳೆಯೊಬ್ಬರ ಜೊತೆ ಸ್ವಾಮೀಜಿ ವೀಡಿಯೋ ಕಾಲ್ ಮಾಡಿ ಮಾತನಾಡಿದ್ದಾರೆ ಎಂದು ಹೇಳಲಾದ ವಿಡಿಯೋದಲ್ಲಿರುವ ಮಹಿಳೆಗಾಗಿ ರಾಮನಗರ ಜಿಲ್ಲಾ ಪೊಲೀಸ ಹುಡುಕಾಟ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.
ಮಹಿಳೆಯ ಧ್ವನಿ ವಿಡಿಯೋದಲ್ಲಿ ದಾಖಲಾಗಿದೆ. ಪೊಲೀಸರು ವೀಡಿಯೊದ ಅಸಲಿತನವನ್ನು ಪರಿಶೀಲಿಸುತ್ತಿದ್ದಾರೆ. ಒಂದು ವೇಳೆ ಅಂತಹ ಮಹಿಳೆ ಇದ್ದಲ್ಲಿ ಸ್ವಾಮೀಜಿ ಆತ್ಮಹತ್ಯೆಗೆ ಪ್ರಚೋದನೆ ನೀಡಿರಬಹುದೇ ಎಂಬ ಅಂಶದ ಬಗ್ಗೆ ಕುರಿತು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಇನ್ನೂ ಸ್ವಾಮೀಜಿಗೆ ಆಪ್ತರಾಗಿರುವ ಕಾರು ಚಾಲಕ ಮತ್ತು ಮಠದ ಅರ್ಚಕರ ಮೊಬೈಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಿಡಿಯೋ ವೈರಲ್ ಆದ ಬಳಿಕ ವಿಡಿಯೋ ಮಾಡಿದವರು ಯಾರು ಎಂಬುದನ್ನು ಕಂಡುಹಿಡಿಯಲು ಪೊಲೀಸರು ಮೂವರು ಮಹಿಳೆಯರನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka