ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತರ ಭೇಟಿ

ಬೆಂಗಳೂರಿನ ಹಲವೆಡೆ ಭಾರಿ ಪ್ರಮಾಣದಲ್ಲಿ ಮಳೆ ಸುರಿದ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತರು ಮತ್ತು ಎಲ್ಲಾ ವಲಯಗಳ ಆಯುಕ್ತರು, ಜಂಟಿ ಆಯುಕ್ತರು ಮತ್ತು ವಲಯಗಳ ಮುಖ್ಯ ಅಭಿಯಂತರರು ಆಯಾ ವಲಯಗಳಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಯಲಹಂಕ, ಪೂರ್ವ ಸೇರಿದಂತೆ ಹಲವು ವಲಯಗಳಲ್ಲಿ ಮಧ್ಯರಾತ್ರಿಯವರೆಗೆ ಸಂಚರಿಸಿದ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅವರು ಮಳೆ ನೀರು ಸರಾಗವಾಗಿ ಹರಿದು ಹೋಗಲು ತೆಗೆದುಕೊಂಡ ಕ್ರಮಗಳನ್ನು ಪರಿಶೀಲಿಸಿದರು ಮತ್ತು ವಲಯವಾರು ಕಂಟ್ರೋಲ್ ರೂಂ ಗಳನ್ನು ಸಹಾ ಪರಿಶೀಲಿಸಿದರು. ಹಾಗೆಯೇ ವಿಶೇಷ / ವಲಯ ಆಯುಕ್ತರುಗಳೂ ಸಹಾ ಅವರ ವ್ಯಾಪ್ತಿಯ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿನೀಡಿ ಪರಿಶೀಲನೆ ನಡೆಸಿದರು.
ಪಾಲಿಕೆಯ ಎಲ್ಲಾ ಹಿರಿಯ ಅಧಿಕಾರಿಗಳು ಆಯಾ ವಲಯಗಳ ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳ ವ್ಯಾಪ್ತಿಯಲ್ಲಿ ಸಂಚರಿಸಿ ಸೂಕ್ತ ರೀತಿಯ ಕ್ರಮಗಳನ್ನು ಕೈಗೊಂಡರು.
ಪಾಲಿಕೆಯ ಅರಣ್ಯ ಇಲಾಖೆಯ ಅಧಿಕಾರಿಗಳೂ ಸಹಾ ಸನ್ನದ್ಧ ಸ್ಥಿತಿಯಲ್ಲಿದ್ದು ಯಾವುದೇ ವಿಪತ್ತಿನ ಪರಿಸ್ಥಿತಿಯನ್ನು ಎದುರಿಸಿ ನಿರ್ವಹಿಸಲು ಕಾರ್ಯಪ್ರವೃತ್ತರಾಗಿ ದಿನದ 24X7 ಕೆಲಸ ಮಾಡುತ್ತಿದ್ದಾರೆ.
ಸಾರ್ವಜನಿಕರು ಮಳೆಯಿಂದಾಗಿ ತೊಂದರೆಗೆ ಒಳಪಟ್ಟಲ್ಲಿ ಕೂಡಲೇ ಕೇಂದ್ರ ಕಛೇರಿಯ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ 1533 ಸಂರ್ಪಕಿಸಲು ಮುಖ್ಯ ಆಯುಕ್ತರು ಕೋರಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw