ಯಾವುದೇ ಕಾರಣಕ್ಕೂ ಬಿಬಿಎಂಪಿ ಆಸ್ತಿ ತೆರಿಗೆ ಹೆಚ್ಚಳ ಮಾಡಲು ಬಿಡುವುದಿಲ್ಲ: ಜಗದೀಶ್ ವಿ ಸದಂ

jagadesh v sam
31/05/2023

ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ತನ್ನ 5 ಗ್ಯಾರಂಟಿಗಳನ್ನು ಪೂರೈಸಲು ಬಿಬಿಎಂಪಿ ಆಸ್ತಿ ತೆರಿಗೆಯನ್ನು ಹೆಚ್ಚಿಸಲು ಕೈಗೊಂಡಿರುವ ನಿರ್ಧಾರ ನಿಜಕ್ಕೂ ನಾಚಿಕೆಗೇಡಿತನದ ಪರಮಾವಧಿ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದರು.

ಮುಖ್ಯಮಂತ್ರಿಗಳು ಎಲ್ಲಿಯೂ ಶೂನ್ಯ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಲೇ ಇಲ್ಲ. ಪಾರದರ್ಶಕತೆ ಮತ್ತು ಪ್ರಾಮಾಣಿಕತೆಯನ್ನು ಸಾಧಿಸಿ ರಾಜಸ್ವ ಸಂಗ್ರಹ ಹೆಚ್ಚಿಸಿ, ಸಂಪನ್ಮೂಲ ಕ್ರೂಡೀಕರಣ ಗೊಳಿಸುವ ತಾಕತ್ತು ಕಾಂಗ್ರೆಸ್ ಸರ್ಕಾರಕ್ಕೆ ಇದೆಯೇ ಎಂದು ಪ್ರಶ್ನಿಸಿದರು.

ಚುನಾವಣಾ ಅಕ್ರಮಗಳಿಗಾಗಿ ಈಗಾಗಲೇ ಸಾವಿರಾರು ಕೋಟಿ ರೂಪಾಯಿಗಳನ್ನು ವ್ಯಯ ಮಾಡಿರುವ ಕಾಂಗ್ರೆಸ್ ಪಕ್ಷ ಒಂದು ಕಡೆಯಾದರೆ ಈ ಇಂದಿನ ಬಿಜೆಪಿ ಸರ್ಕಾರ 3,00,000 ಕೋಟಿಗೂ ಹೆಚ್ಚು ಸಾಲವನ್ನು ಮಾಡಿ ರಾಜ್ಯದ ಬೊಕ್ಕಸವನ್ನು ಬರ್ಬಾದ್ ಮಾಡಿದೆ. ಕಾಂಗ್ರೆಸ್ ಸರ್ಕಾರವು ಯಾವುದೇ ಸಾಲಗಳನ್ನು ಪಡೆಯದೆ ಐದು ಗ್ಯಾರಂಟಿಗಳನ್ನು ಈಡೇರಿಸಲು ಸಾಧ್ಯವಿದೆಯೇ ? ಜಗದೀಶ್ ವಿ ಸದಂ ಪ್ರಶ್ನೆಸಿದರು.

ಒಂದು ಕೈಯಲ್ಲಿ ಉಚಿತ ಕೊಡುಗೆಗಳನ್ನು ನೀಡಿ ಮತ್ತೊಂದು ಕೈಯಲ್ಲಿ ಕಿತ್ತುಕೊಳ್ಳುವ ರೀತಿಯಲ್ಲಿ ಬಿಬಿಎಂಪಿ ಆಸ್ತಿ ತೆರಿಗೆಯನ್ನು ಹೆಚ್ಚಿಸಿದಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಬೀದಿಗಿಳಿದು ತೀವ್ರ ಮಟ್ಟದ ಹೋರಾಟವನ್ನು ಮಾಡಬೇಕಾಗುತ್ತದೆ ಎಂದು ಸರ್ಕಾರವನ್ನು ಎಚ್ಚರಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ

Exit mobile version