ಬೀದಿನಾಯಿಗಳ ಮೇಲೆ ಬಿಸಿಸಿಐ ಅಧ್ಯಕ್ಷ ಅಕ್ಕರೆ: ಊಟ ಕೊಡುವ ಬಿನ್ನಿ !!

23/11/2023
ಚಾಮರಾಜನಗರ: ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಈಗ ಕೃಷಿಯಲ್ಲಿ ಸೆಕೆಂಡ್ ಇನ್ನಿಂಗ್ ಆರಂಭಿಸಿದ್ದಾರೆ. ಇದರ ಜೊತೆಗೆ, ಬೀದಿನಾಯಿಗಳ ಮೇಲೆ ವಿಶೇಷ ಅಕ್ಕರೆ ಇಟ್ಟುಕೊಂಡಿದ್ದು ಆಹಾರ ಜೊತೆಗೆ ಔಷಧವನ್ನು ಕೊಡುವ ಮೂಲಕ ಪ್ರಾಣಿ ಪ್ರೀತಿ ಮೆರೆದಿದ್ದಾರೆ.
ಗುಂಡ್ಲುಪೇಟೆ ತಾಲೂಕಿನ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಕೃಷಿ ನಡೆಸುವ ರೋಜರ್ ಬಿನ್ನಿ ತಾವು ಬಂದಾಗಲೆಲ್ಲ ಬೀದಿನಾಯಿಗಳಿಗೆ ಆಹಾರ ನೀಡುತ್ತಾರೆ. ಕೆಲ ದಿನಗಳ ಹಿಂದೆಯಷ್ಟೇ, ಬೀದಿನಾಯಿಗಳಿಗೆ ಚುಚ್ಚುಮದ್ದನ್ನು ಕೂಡ ಹಾಕಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ತಾವು ಕೃಷಿ ಭೂಮಿಗೆ ತೆರಳುವ ಮಾರ್ಗ ಮಧ್ಯದಲ್ಲಿ ಸಿಗುವ ಬೀದಿನಾಯಿಗಳಿಗೆ ಆಹಾರ ನೀಡುತ್ತಾ ಸಾಗುವ ಬಿನ್ನಿಯ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲೂ ವೈರಲ್ ಆಗಿದೆ.
ಕೆಲ ದಿನಗಳ ಹಿಂದೆಯಷ್ಟೇ ಕೃಷಿ ಉಪಯೋಗಕ್ಕಾಗಿ ಚಾಮರಾಜನಗರದಲ್ಲಿ ಟ್ರಾಕ್ಟರ್ ಖರೀದಿಸಿ ಗಮನ ಸೆಳೆದಿದ್ದರು.