4:29 AM Saturday 18 - October 2025

ಬೀಚ್ ಗೆ ಬಂದಿದ್ದ ವಿದ್ಯಾರ್ಥಿನಿಯ ಅತ್ಯಾಚಾರ: ಆರೋಪಿ ಅರೆಸ್ಟ್

mangalore rap
01/08/2022

ಮಂಗಳೂರು: ಕಾಲೇಜು ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ ಘಟನೆ ಮಂಗಳೂರಿನ ಎನ್ ಐಟಿಕೆ ಬೀಚ್ ಬಳಿ ನಡೆದಿದೆ.

ಮುನಾಝ್ ಅಹಮ್ಮದ್(30), ಬಂಧಿತ ಆರೋಪಿ. ಈತ ಮೀನು ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಈತ ಅತ್ಯಾಚಾರದ ದೃಶ್ಯವನ್ನು ವಿಡಿಯೋ ಮಾಡಿಟ್ಟುಕೊಂಡು ಆಕೆಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ. ಜುಲೈ 27 ರಂದು ಎನ್ ಐಟಿಕೆ ಬೀಚ್ ಗೆ ವಿದ್ಯಾರ್ಥಿನಿ ತನ್ನ ಸಹಪಾಠಿಯೊಂದಿಗೆ ಬಂದಿದ್ದಳು. ಬೀಚ್ ಗೆ ಬಂದಿದ್ದ ಇಬ್ಬರನ್ನು ಕಂಡ ಮುನಾಝ್ ಅಹಮದ್ ವಿದ್ಯಾರ್ಥಿನಿಯ ಸಹಪಾಠಿಯನ್ನು ಹೆದರಿಸಿ ಓಡಿಸಿದ್ದಾನೆ. ಆ ಬಳಿಕ ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿದ್ದಾನೆ.

ಅತ್ಯಾಚಾರದ ವೀಡಿಯೋ ವನ್ನು ಮೊಬೈಲ್ ನಲ್ಲಿ ಚಿತ್ರಿಕರಿಸಿ ವಿದ್ಯಾರ್ಥಿನಿಗೆ ತೋರಿಸಿ ಕಿರುಕುಳ ನೀಡಲು ಆರಂಭಿಸಿದ್ದ. ಈ ಕುರಿತು ವಿದ್ಯಾರ್ಥಿನಿ ಪೊಲೀಸ್ ಕಮೀಷನರ್ ಭೇಟಿ ನೀಡಿ ನಡೆದ ಘಟನೆಯ ಬಗ್ಗೆ ದೂರು ನೀಡಿದ್ದಳು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version