ಭೀಕರ ಅಪಘಾತ: ಒಂದೇ ಕುಟುಂಬದ ಮೂವರ ಸಾವು - Mahanayaka

ಭೀಕರ ಅಪಘಾತ: ಒಂದೇ ಕುಟುಂಬದ ಮೂವರ ಸಾವು

acedient
28/02/2022

ಚಿಕ್ಕಬಳ್ಳಾಪುರ: ಖಾಸಗಿ ಬಸ್‌ ವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಹೊನ್ನೇನಹಳ್ಳಿ ಕ್ರಾಸ್ ಬಳಿ ನಡೆದಿರುವ ಬಗ್ಗೆ ವರದಿಯಾಗಿದೆ.

ಬೆಂಗಳೂರು ಮೂಲದ ನಿವಾಸಿಗಳಾದ ಗೌಸ್ (35), ಅವರ ಪತ್ನಿ ಅಮ್ಮಾಜಾನ್ (25) ಮತ್ತು ಪುತ್ರ ರಿಯಾಜ್ (13) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಗೌಸ್ ಅವರು ಮೂಲತಃ ಹೊಸಕೋಟೆ ನಿವಾಸಿಯಾಗಿದ್ದು, ಅಮ್ಮಾಜಾನ್ ಆಂಧ್ರ ಮೂಲದವರು. ಇವರು ದ್ವಿಚಕ್ರ ವಾಹನದಲ್ಲಿ ಬೆಂಗಳೂರಿನಿಂದ ಆಂಧ್ರ ಪ್ರದೇಶದ ಕದ್ರಿ ಕಡೆಗೆ ತೆರಳುತ್ತಿದ್ದರು . ಈ ವೇಳೆ ಬಾಗೆಪಲ್ಲಿ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್​​ ಹೊನ್ನೇನಹಳ್ಳಿ ಕ್ರಾಸ್ ಬಳಿ ಬೈಕ್​​ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್​ ಠಾಣೆಯ ಸಬ್‌ಇನ್ಸ್​ಪೆಕ್ಟರ್ ಮತ್ತು ಸಿಬ್ಬಂದಿ ಆಗಮಿಸಿ ಮೃತ ದೇಹಗಳನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದು, ತನಿಖೆ ಮುಂದುವರಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮಣಿಪುರದಲ್ಲಿ ಇಂದು ಮೊದಲ ಹಂತದ ಮತದಾನ

ರಷ್ಯಾ ದಾಳಿ: 14 ಮಕ್ಕಳು ಸೇರಿದಂತೆ 352 ಮಂದಿ ನಾಗರಿಕರು ಸಾವು; ಉಕ್ರೇನ್‌

ಮದ್ಯದ ಮತ್ತಿನಲ್ಲಿ ಕಾರು ಚಲಾಯಿಸಿ ಅಪಘಾತ: ಮಾಜಿ ಕ್ರಿಕೆಟಿಗ ವಿನೋದ್​ ಕಾಂಬ್ಳಿ ಬಂಧನ, ಬಿಡುಗಡೆ

ಬಿಬಿಎಂಪಿ ಕಚೇರಿಗಳ ಮೇಲೆ ಎಸಿಬಿ ದಾಳಿ: ಕೋಟ್ಯಂತರ ರೂಪಾಯಿ ಅಕ್ರಮ ವ್ಯವಹಾರ ಪತ್ತೆ

ದೇಶ ರಕ್ಷಣೆಗೆ ಗನ್ ಹಿಡಿದ ಮಿಸ್ ಉಕ್ರೇನ್

 

ಇತ್ತೀಚಿನ ಸುದ್ದಿ