ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ಐವರ ಸಾವು - Mahanayaka
3:41 AM Wednesday 15 - October 2025

ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ಐವರ ಸಾವು

accident
05/02/2022

ಲಕ್ನೋ: ನಿಯಂತ್ರಣ ತಪ್ಪಿದ ಕಾರೊಂದು ಟ್ರಕ್‌ ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ರಾಂಪುರದಲ್ಲಿ ಸಂಭವಿಸಿದೆ.ಚಾಲಕ ಸೇರಿ ಕಾರಿನಲ್ಲಿ 6 ಜನರು ಪ್ರಯಾಣ ಮಾಡುತ್ತಿದ್ದರು. ಅಪಘಾತದ ರಭಸಕ್ಕೆ 6 ಮಂದಿ ಪೈಕಿ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.


Provided by

ಅಪಘಾತದಲ್ಲಿ ಚಾಲಕ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯುಪಿ-ಉತ್ತರಾಖಂಡ್ ಗಡಿಯಲ್ಲಿರುವ ಸ್ವರ್ ನಗರದಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಭಾಗವಹಿಸಿ ಕಾರಿನಲ್ಲಿದ್ದ ಎಲ್ಲಾ 6 ಜನರು ಮೊರಾದಾಬಾದ್‌ ನಲ್ಲಿರುವ ತಮ್ಮ ಮನೆಗೆ ಮರಳುತ್ತಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಗಾಯಗೊಂಡ ಚಾಲಕನನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ.
ಬಳಿಕ ಎಸ್‌ ಡಿಎಂ ರಾಜೇಶ್‌ಕುಮಾರ್‌ ಮಾತನಾಡಿ, ಶಿಕಂಪುರ ಎಂಬ ಸ್ಥಳದಲ್ಲಿ ಅಪಘಾತ ಸಂಭವಿಸಿದೆ. ಸ್ಥಳದ ಸಮೀಪದಲ್ಲಿ ಒಂದು ಅಡ್ಡರಸ್ತೆ ಇದೆ. ಇಲ್ಲಿನ ಸ್ಪೀಡ್ ಬ್ರೇಕರ್ ಬಳಿಕ ಕಾರು ನಿಯಂತ್ರಣ ತಪ್ಪಿದೆ ಎಂದು ಶಂಕಿಸಲಾಗಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ಮೊರಾದಾಬಾದ್‌ ನ ಜಯಂತಿಪುರ ನಿವಾಸಿಗಳು ಎಂದು ಗುರುತಿಸಲಾಗಿದ್ದು, ಅಪಘಾತದಲ್ಲಿ ಬಲಿಯಾದವರೆಲ್ಲರೂ ಇಕೋ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ನಿಯಂತ್ರಣ ತಪ್ಪಿದ ಕಾರು ಡಿಕ್ಕಿ ಹೊಡೆದ ಟ್ರಕ್‌ ನ ಬಗ್ಗೆಯೂ ಪತ್ತೆ ಹಚ್ಚಲಾಗುತ್ತಿದೆ ಎಂದು ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ವಿಶ್ವದ ಎತ್ತರದ ರಾಮಾನುಜಾಚಾರ್ಯರ ಪ್ರತಿಮೆ; ಇಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ

ಡ್ರಿಂಕ್ಸ್‌ ಮಾಡಲು ಪತಿಯನ್ನು ಕರೆದುಕೊಂಡು ಹೋಗುತ್ತಿದ್ದ ಬಾವನ ಕೊಲೆ

ಡಿವೋರ್ಸ್ ಹೆಚ್ಚಾಗಲು ಟ್ರಾಫಿಕ್ ಸಮಸ್ಯೆ ಕಾರಣ: ಅಮೃತಾ ಫಡ್ನವೀಸ್

ಜೈಲಿನಲ್ಲಿ ಅಗ್ನಿ ಅವಘಡ: 20 ಕೈದಿಗಳು ಆಸ್ಪತ್ರೆಗೆ ದಾಖಲು

ಗಾನಕೋಗಿಲೆ ಲತಾ ಮಂಗೇಶ್ಕರ್‌ ಸ್ಥಿತಿ ಗಂಭೀರ

 

ಇತ್ತೀಚಿನ ಸುದ್ದಿ