ಗ್ಯಾಸ್, ತೈಲ ಬೆಲೆ ಏರಿಕೆಗೆ ತಾಲಿಬಾನ್ ಕಾರಣ ಎಂದ ಶಾಸಕ ಅರವಿಂದ್ ಬೆಲ್ಲದ್! - Mahanayaka

ಗ್ಯಾಸ್, ತೈಲ ಬೆಲೆ ಏರಿಕೆಗೆ ತಾಲಿಬಾನ್ ಕಾರಣ ಎಂದ ಶಾಸಕ ಅರವಿಂದ್ ಬೆಲ್ಲದ್!

aravind bellad
03/09/2021

ಹುಬ್ಬಳ್ಳಿ: ಬೆಲೆ ಏರಿಕೆಗೆ ತಾಲಿಬಾನ್ ಕಾರಣ ಎಂದು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಹೇಳಿಕೆ ನೀಡಿದ್ದು, ತಾಲಿಬಾನ್ ಉಗ್ರರಿಂದ ಇಡೀ ಪ್ರಪಂಚಕ್ಕೆ ತೊಂದರೆಯಾಗುತ್ತಿದೆ. ಭಾರತದಲ್ಲಿ ಕೂಡ ಗ್ಯಾಸ್ ಸಿಲಿಂಡರ್ ದರ, ತೈಲ ದರ ಏರಿಕೆಯಾಗುತ್ತಿದೆ ಎಂದು ಅವರು ಹೇಳಿದ್ದಾರೆ.


Provided by

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮತದಾನದ ಬಳಿಕ ಮಾತನಾಡಿದ ಬೆಲ್ಲದ್, ತಾಲಿಬಾನ್ ಸಮಸ್ಯೆಯಿಂದಾಗಿ ಕಚ್ಛಾ ತೈಲ ಬರುತ್ತಿಲ್ಲ. ಹಾಗಾಗಿ ಇಂಧನ ದರ ದೇಶದಲ್ಲಿ ಹೆಚ್ಚುತ್ತಿದೆ. ಬೆಲೆ ಏರಿಕೆಗೆ ಕಾರಣ ಏನು ಎನ್ನುವುದನ್ನು ಮತದಾರರು ಅರ್ಥ ಮಾಡಿಕೊಳ್ಳುತ್ತಾರೆ. ಜನರು ಪ್ರಬುದ್ಧರಾಗಿದ್ದಾರೆ ಎಂದು ಅವರು ಹೇಳಿದರು.

ಬೆಲೆ ಏರಿಕೆಯಿಂದ ಯಾರಿಗೂ ಸಮಸ್ಯೆಯಾಗಿಲ್ಲ, ನಿಜವಾಗಿ ಗ್ಯಾಸ್ ಸಿಲಿಂಡರ್ ಬಳಸುವವರು ಯಾರೂ ಬೀದಿಗೆ ಬಂದಿಲ್ಲ. ಇದೊಂದು ಡ್ರಾಮಾ ಎಂದು ಸಚಿವ ನಾರಾಯಣಗೌಡ ಹೇಳಿಕೆ ನೀಡಿದ ಬೆನ್ನಲ್ಲೇ  ಇದೀಗ ಶಾಸಕ ಅರವಿಂದ್ ಬೆಲ್ಲದ್ ಈ ಹೇಳಿಕೆಯನ್ನು ನೀಡಿದ್ದಾರೆ.


Provided by

ತಾಲಿಬಾನ್ ಸಮಸ್ಯೆ ಆರಂಭಕ್ಕೂ ಮೊದಲಿನಿಂದಲೇ ಭಾರತದಲ್ಲಿ ತೈಲ ಬೆಲೆ, ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಏರಿಕೆ ಆರಂಭವಾಗಿತ್ತು. ಇದೀಗ ನಿಯಂತ್ರಣಕ್ಕೆ ಸಿಗದಷ್ಟರ ಮಟ್ಟಿಗೆ ಬೆಲೆ ಏರಿಕೆಯಾಗುತ್ತಿದೆ. ಈ ನಡುವೆ ಬಿಜೆಪಿ ನಾಯಕರು ಜನರ ಸಂಕಷ್ಟಗಳನ್ನು ಡ್ರಾಮಾ ಎಂದು ಹೇಳುತ್ತಿದ್ದಾರೆ. ಇನ್ನೊಂದಡೆ ತಾಲಿಬಾನ್ ಹೆಸರು ಹೇಳಿಕೊಂಡು ಆಡಳಿತ ವೈಫಲ್ಯವನ್ನು ಮರೆಮಾಚಲು ಪ್ರಯತ್ನಿಸುತ್ತಿದ್ದಾರೆ ಎನ್ನುವ ಆಕ್ರೋಶಗಳು ಕೇಳಿ ಬಂದಿವೆ.

ಇನ್ನಷ್ಟು ಸುದ್ದಿಗಳು…

ತ್ರಿಸ್ಟಾರ್ ಹೊಟೇಲ್ ನಲ್ಲಿ 8 ತಿಂಗಳು ತಂಗಿದ | 25 ಲಕ್ಷ ರೂ. ಬಿಲ್ ಆದ ಬಳಿಕ ಆತ ಮಾಡಿದ್ದೇನು ಗೊತ್ತಾ?

ಗಂಡ, ಹೆಂಡತಿ ನಡುವೆ ರಾಜಿ ಪಂಚಾಯಿತಿ ವೇಳೆ ಮನ ಬಂದಂತೆ ಗುಂಡು ಹಾರಿಸಿದ ನಿವೃತ್ತ ಸೈನಿಕ | ಇಬ್ಬರು ಸಾವು

ಭಾಷಣದ ವೇಳೆ ಊಟಕ್ಕೆ ಮುಗಿಬಿದ್ದ ಮಹಿಳಾ ಕಾರ್ಯಕರ್ತೆಯರು | ಬೇಸರ ವ್ಯಕ್ತಪಡಿಸಿದ ದೇವೇಗೌಡರು

ಭಾರತದ ಬಡ ಮುಸ್ಲಿಮರನ್ನು ತಾಲಿಬಾನಿಗಳು ಎನ್ನುವುದನ್ನು ನಿಲ್ಲಿಸಬೇಕು | ಓವೈಸಿ ಕಿಡಿ

ದೆಹಲಿ ವಿಧಾನಸಭೆಯಿಂದ ಕೆಂಪುಕೋಟೆಯನ್ನು ಸಂಪರ್ಕಿಸುವ ರಹಸ್ಯ ಸುರಂಗಮಾರ್ಗ ಪತ್ತೆ

ಜಾಮೀನಿನಲ್ಲಿ ಹೊರ ಬಂದ ಲೈಂಗಿಕ ಕಿರುಕುಳದ ಆರೋಪಿ ಸಂತ್ರಸ್ತೆಯನ್ನು ಗುಂಡಿಟ್ಟು ಕೊಂದ!

ಕೈಕೊಟ್ಟ ಕೇಂದ್ರ ಸರ್ಕಾರ: ಈ ಪ್ರಮುಖ 10 ಯೋಜನೆಗಳಿಗೆ ಬಿಡಿಗಾಸೂ ಬಿಡುಗಡೆಯಾಗಿಲ್ಲ!

ಖಾಸಗಿ ವಾಹಿನಿ, ವೆಬ್ ಪೋರ್ಟಲ್, ಸಾಮಾಜಿಕ ಮಾಧ್ಯಮಗಳಲ್ಲಿ ಕೋಮುಸೌಹಾರ್ದಕ್ಕೆ ಧಕ್ಕೆ ತರುವಂತಹ ಸುದ್ದಿಗಳನ್ನು ಹರಡಲಾಗುತ್ತಿದೆ | ಸುಪ್ರೀಂ ಕೋರ್ಟ್ ಕಳವಳ

ಇತ್ತೀಚಿನ ಸುದ್ದಿ