ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ: ಕಾಂಗ್ರೆಸ್ ಶಾಸಕ ಸತೀಶ್ ಕೃಷ್ಣ ಸೈಲ್ ಗೆ ಬಿಗ್ ರಿಲೀಫ್
13/11/2024
ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸತೀಶ್ ಕೃಷ್ಣ ಸೈಲ್ ಅವರಿಗೆ ಬಿಗ್ ರಿಲೀಫ್ ದೊರಕಿದೆ.
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾರವಾರ ಶಾಸಕ ಸತೀಶ್ ಕೃಷ್ಣ ಸೈಲ್ ಹಾಗೂ ಇತರ 7 ಮಂದಿ ಆರೋಪಿಗಳನ್ನು ದೋಷಿ ಎಂದು ಶಿಕ್ಷೆಯ ಪ್ರಮಾಣ ಪ್ರಕಟ ಮಾಡಿತ್ತು.
ಈ ಸಂಬಂಧ ಶಾಸಕ ಸತೀಶ್ ಕೃಷ್ಣ ಸೈಲ್ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಇದೀಗ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠ, ಶಾಸಕ ಸತೀಶ್ ಸೈಲ್ ಸೇರಿ ಎಲ್ಲ ಆರೋಪಿಗಳಿಗೂ ಜಾಮೀನು ನೀಡಿ ಆದೇಶ ಹೊರಡಿಸಿದೆ.
ಅಲ್ಲದೇ ಈ ಹಿಂದೆ ಸೆಷನ್ ಕೋರ್ಟ್ ನೀಡಿದ್ದ ತೀರ್ಪನ್ನು ಅಮಾನತು ಮಾಡಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: