ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ಅರ್ಜಿ ಆಹ್ವಾನ - Mahanayaka
8:28 AM Thursday 7 - December 2023

ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ಅರ್ಜಿ ಆಹ್ವಾನ

03/11/2020

ಧಾರವಾಡ: ಹಿಂಗಾರು ಹಂಗಾಮಿನಲ್ಲಿ ಆಗುವ ನೈಸರ್ಗಿಕ ಬದಲಾವಣೆಗಳಿಂದ ಮಳೆ, ವಾತಾವರಣದ ಉಷ್ಣತೆ, ಗಾಳಿಯ ವೇಗ, ವಾತಾವರಣದ ಆದ್ರ್ರತೆ ಹಾಗೂ ಇತರೆ ಹವಾಮಾನದ ವೈಪರೀತ್ಯದಿಂದಾಗುವ ಬೆಳೆಗಳ ಹಾನಿಯ ವೆಚ್ಚ ಭರಿಸುವ ಸಲುವಾಗಿ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು ರಾಜ್ಯ ಸರ್ಕಾರವು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುತ್ತಿದೆ.


ಜಿಲ್ಲೆಯಲ್ಲಿ ಮುಖ್ಯವಾಗಿ ಹಿಂಗಾರು ಹಂಗಾಮಿನಲ್ಲಿ ಮಾವು ಬೆಳೆಯನ್ನು ಈ ಯೋಜನೆಯಡಿ ಒಳಪಡಿಸಲು ಸರ್ಕಾರ ಆದೇಶಿಸಿದೆ. ಪ್ರಸಕ್ತ ಹಿಂಗಾರು ಹಂಗಾಮಿನಲ್ಲಿ ಈಗಾಗಲೇ ಬೆಳೆ ಸಾಲ ಪಡೆದ ಮತ್ತು ಬೆಳೆ ಸಾಲ ಪಡೆಯದ ಮಾವು ಬೆಳೆಯುವ ರೈತರು ಈ ಯೋಜನೆಯಲ್ಲಿ ಭಾಗವಹಿಸಬಹುದಾಗಿದೆ. ಜಿಲ್ಲೆಯ ಪ್ರಮುಖ ಹೋಬಳಿಗಳಾದ ಅಮ್ಮಿನಭಾವಿ, ಧಾರವಾಡ, ಗರಗ, ಅಳ್ನಾವರ, ಹುಬ್ಬಳ್ಳಿ, ಛಬ್ಬಿ, ಕಲಘಟಗಿ, ತಬಕದ ಹೊನ್ನಳ್ಳಿ, ದುಮ್ಮವಾಡ, ಕುಂದಗೋಳ ಹಾಗೂ ಸಂಶಿ ವ್ಯಾಪ್ತಿಯ ಗ್ರಾಮ ಪಂಚಾಯತಗಳು ಈ ಯೋಜನೆಗೆ ಒಳಪಟ್ಟಿರುತ್ತವೆ.


 

2020-21 ನೇ ಸಾಲಿನಲ್ಲಿ ಧಾರವಾಡ ಜಿಲ್ಲೆಯಲ್ಲಿ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಮಾವು ಬೆಳೆಗೆ ವಿಮಾ ಸೌಲಭ್ಯವಿದ್ದು, ಬೆಳೆಸಾಲ ಪಡೆದ ಹಾಗೂ ಪಡೆಯದ ರೈತರು ಸ್ಥಳೀಯ ಬ್ಯಾಂಕ ಅಥವಾ ಸಹಕಾರ ಸಂಘಗಳಲ್ಲಿ ತುರ್ತಾಗಿ ಬೆಳೆವಿಮೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 15 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಯನ್ನು ಅಥವಾ ತೋಟಗಾರಿಕೆ ಉಪನಿರ್ದೇಶಕರು (ಜಿಪಂ) ಧಾರವಾಡ ಇವರ ಕಛೇರಿಯನ್ನು ಹಾಗೂ ಬ್ಯಾಂಕ್ ಶಾಖೆ ಅಥವಾ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜನರಲ್ ಇನ್ಸುರೆನ್ಸ್ ಕಂಪನಿ ರವರನ್ನು ಅಥವಾ ಹೆಚ್ಚಿನ ವಿವರಗಳಿಗೆ ದೂರವಾಣಿ ಸಂ:0836 2746334 ಸಂಪರ್ಕಿಸಬಹುದೆಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಇತ್ತೀಚಿನ ಸುದ್ದಿ