ಬೆಳಗಾವಿ: ಕಲುಷಿತ ನೀರು ಸೇವಿಸಿ 41 ಮಂದಿ ಅಸ್ವಸ್ಥ

ಬೆಳಗಾವಿ: ಕಲುಷಿತ ನೀರು ಸೇವಿಸಿ ಒಂದೇ ದಿನ 41 ಮಂದಿ ಮಂದಿ ಅಸ್ವಸ್ಥರಾಗಿದ್ದು, ಈ ಪೈಕಿ ತೀವ್ರ ಅಸ್ವಸ್ಥಗೊಂಡಿರುವ ಮೂವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ಹಾಗೂ ಮೂವರನ್ನು ಬೈಲಹೊಂಗಲ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸವದತ್ತಿ ತಾಲ್ಲೂಕಿನ ಚಚಡಿ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಸಾರ್ವಜನಿಕರಿಗೆ ವಾಂತಿ—ಬೇದಿ ಕಾಣಿಸಿಕೊಂಡಿದೆ. ಬೋರ್ ವೇಲ್ ಗಳ ಕಲುಶಿತ ನೀರು ಸೇವನೆಯಿಂದಾಗಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.
ಅಸ್ವಸ್ಥಗೊಂಡಿರುವವರ ಪೈಕಿ ಈರವ್ವ ಗಾಳಿಮಠ (63) ಎಂಬವರ ಸ್ಥಿತಿ ಗಂಭೀರವಾಗಿದೆ. ಅವರನ್ನು ಜಿಲ್ಲಾಸ್ಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. ಇನ್ನಿಬ್ಬರು ಒಳರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಚಚಡಿ ಹಾಗೂ ಇಂಚಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಒಳರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗ್ರಾಮದ ಬೋರ್ ವೆಲ್ ಗಳ ಮೂಲಕ ಓವರ್ ಹೆಡ್ ಟ್ಯಾಂಕ್ ಗೆ ನೀರು ತುಂಬಿಸಲಾಗುತ್ತದೆ. ಅಲ್ಲಿಂದ ಮನೆ-ಮನೆಗೆ ನಳಗಳ ಮೂಲಕ ಹರಿಸಲಾಗುತ್ತದೆ. ಮನೆಗಳಿಗೆ ನೀರು ಸರಬರಾಜು ಮಾಡುವ ಪೈಪ್‌ಲೈನ್‌ನಲ್ಲಿ ಚರಂಡಿ ನೀರು ಸೇರಿಕೊಂಡಿದ್ದರಿಂದ ಈಗ ಅವಘಡ ಸಂಭವಿಸಿದೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.
ಗ್ರಾಮದಲ್ಲಿ ನಾಲ್ವರು ವೈದ್ಯರು ಹಾಗೂ ಹಲವು ವೈದ್ಯಕೀಯ ಸಿಬ್ಬಂದಿ ಸ್ಥಳದಲ್ಲೇ ಇದ್ದಾರೆ. ನೀರನ್ನು ಕುದಿಸಿ 90% ಕುಡಿಯುವಂತೆ ಜಾಗೃತಿ ವಹಿಸಲಾಗಿದೆ.
ಗ್ರಾಮದಲ್ಲಿ ಪಿಡಿಒ ನಿರ್ಲಕ್ಷ್ಯ ವಹಿಸಿದ್ದರಿಂದ ಸಮಸ್ಯೆ ಉಲ್ಬಣವಾಗಿದೆ. ಗ್ರಾಮದಲ್ಲಿ ಕುಡಿಯುವ ನೀರಿನ ಶುದ್ಧೀಕರಣ ಘಟಕಗಳು ಇದ್ದರೂ ಅವುಗಳನ್ನ ಸರಿಯಾಗಿ ನಿರ್ವಹಣೆ ಮಾಡಿಲ್ಲ ಎನ್ನುವ ಆಕ್ರೋಶ ಕೇಳಿ ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97