ದರ್ಶನ್ ಅವರು ತಪ್ಪು ಮಾಡಿಲ್ಲ, ನ್ಯಾಯ ಸಿಗುತ್ತೆ ಎಂಬ ನಂಬಿಕೆಯಿದೆ : ಕಾಟೇರ ನಿರ್ದೇಶಕ ತರುಣ್ ಸುಧೀರ್

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾಧೀನ ಕೈದಿಯಾಗಿ ಜೈಲಿನಲ್ಲಿರುವ ದರ್ಶನ್ ಅವರನ್ನು ‘ಕಾಟೇರ’ ನಿರ್ದೇಶಕ ತರುಣ್ ಸುಧೀರ್ ಭೇಟಿಯಾದರು.
ಬಳಿಕ ಮಾತನಾಡಿದ ತರುಣ್, ಅವರೇನು ತಪ್ಪು ಮಾಡಿಲ್ಲ ನ್ಯಾಯ ಸಿಗುತ್ತದೆ ಎಂಬ ನಂಬಿಕೆಯಿದೆ ಎಂದರು.
ದರ್ಶನ್ ಅವರಿಗಿಂತ ನಾವೇ ವೀಕ್ ಆಗಿದ್ದೇವೆ. ಅವರಿಗೆ ಜ್ವರ ಇತ್ತು. ಈಗ ರಿಕವರಿ ಆಗಿದ್ದಾರೆ. ಇನ್ನೂ ನನ್ನ ಮತ್ತು ಸೋನಲ್ ವಿಚಾರ ಅವರಿಗೆ ಮೊದಲೇ ತಿಳಿದಿತ್ತು. ದರ್ಶನ್ ಅವರೇ ನಮ್ಮ ಮದುವೆ ಡೇಟ್ ಫಿಕ್ಸ್ ಮಾಡಿದ್ದು ಎಂದರು.
ನನ್ನ ಸಲುವಾಗಿ ಮದುವೆ ಡೇಟ್ ಬದಲಾವಣೆ ಮಾಡೋದು ಬೇಡ ಎಂದು ಅವರು ಹೇಳಿದ್ದಾರೆ. ಅವರು ಏನು ತಪ್ಪು ಮಾಡಿಲ್ಲ ಎನ್ನುವ ನಂಬಿಕೆ ನಮಗೂ ಇದೆ. ನಮ್ಮನ್ನು ಹೆಚ್ಚಾಗಿ ಪ್ರೀತಿಸುವವರ ಮೇಲೆಯೇ ನಮಗೆ ನಂಬಿಕೆ ಹೆಚ್ಚಾಗಿರುತ್ತೆ ಎಂದು ತರುಣ್ ಸುಧೀರ್ ಹೇಳಿದರು.
ಇನ್ನೂ ನಮ್ಮ ಮದುವೆ ದಿನಾಂಕದ ಮುಂಚೆಯೇ ಅವರು ಹೊರಗೆ ಬರುತ್ತಾರೆ ಎನ್ನುವ ಭರವಸೆಯಿದೆ. ಅವರಿಗೆ ಮದುವೆ ಪತ್ರಿಕೆ ಏನು ಕೊಟ್ಟಿಲ್ಲ. ಅದಕ್ಕೆ ಜೈಲಿನಲ್ಲಿ ಅನುಮತಿ ಇಲ್ಲ. ಈಗ ದರ್ಶನ್ ಅವರ ಆಶೀರ್ವಾದ ಪಡೆದು ಬಂದಿದ್ದೇನೆ ಎಂದು ತರುಣ್ ಹೇಳಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97