9:07 PM Thursday 15 - January 2026

ಇನ್ನು ಮುಂದೆ ಬೆಳಗ್ಗೆ 6 ಗಂಟೆಗೆ ಆಜಾನ್ ಕೂಗಲು ನಿರ್ಧಾರ!

azan
17/05/2022

ಬೆಂಗಳೂರು: ರಾಜ್ಯದ ಎಲ್ಲ ಮಸೀದಿಗಳಲ್ಲೂ ಪ್ರತಿ ದಿನ ಬೆಳಗ್ಗೆ 5 ಗಂಟೆ ಬದಲಿಗೆ 6 ಗಂಟೆಗೆ ಆಜಾನ್ ಕೂಗಲು ಮುಸ್ಲಿಂ ಧರ್ಮದ  ಮುಖಂಡರು ನಿರ್ಧರಿಸಿದ್ದಾರೆ.

ಈ ಕುರಿತು ಸಭೆ ನಡೆಸಿದ ಷರಿಯತ್-ಎ-ಹಿಂದ್ ಸಂಘಟನೆ, ಮೌಲ್ವಿಗಳು ಮತ್ತು ಮುಖಂಡರು ಬೆಳಗ್ಗೆ 6 ಗಂಟೆಗೆ ಅಜಾನ್ ಕೂಗಲು ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕ ಬಳಸದಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಈ ಹಿನ್ನೆಲೆ ನ್ಯಾಯಾಲಯದ ಆದೇಶ ಮತ್ತು ಸರ್ಕಾರದ ಮಾರ್ಗಸೂಚಿಗಳನ್ನು ಎಲ್ಲ ಮಸೀದಿಗಳು ಪಾಲಿಸಬೇಕು. ಬೆಳಗಿನ 5 ಗಂಟೆಗೆ ಯಾವುದೇ ಮಸೀದಿಗಳಲ್ಲಿ ಲೌಡ್ ಸ್ಪೀಕರ್ ಬಳಸಬಾರದು ಎಂದು ತೀರ್ಮಾನ ಕೈಗೊಳ್ಳಲಾಗಿತ್ತು. ಎಲ್ಲಾ ಮಸೀದಿಗಳಿಗೂ ಈ ಬಗ್ಗೆ ಸೂಚನೆ ಹೊರಡಿಸಲಾಗಿದೆ ಎಂದು ಹೇಳಲಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಉಮರ್ ಶರೀಫ್  ರಾಜ್ಯದ ಎಲ್ಲಾ ಮಸೀದಿಗಳಲ್ಲಿ ಬೆಳಗ್ಗೆ 6 ಗಂಟೆಗೆ ಅಜಾನ್ ಕೂಗಲು ನಿರ್ಧಾರ ಕೈಗೊಳ್ಳಲಾಗಿದೆ. ಈ ತೀರ್ಮಾನಕ್ಕೆ ಎಲ್ಲಾ ಮಸೀದಿಗಳ ಮುಖಂಡರೂ ಒಪ್ಪಿಗೆ ನೀಡಿದ್ದು, ಇದಕ್ಕೆ ಯಾರ ವಿರೋಧವೂ ವ್ಯಕ್ತವಾಗಿಲ್ಲ. ಸರ್ಕಾರ ಮತ್ತು ಸುಪ್ರೀಂಕೋರ್ಟ್ ತೀರ್ಮಾನವನ್ನು ಪಾಲಿಸಲು ನಿರ್ಧಸಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬೆಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಸಿ.ಹೆಚ್.ಪ್ರತಾಪ್ ರೆಡ್ಡಿ ಅಧಿಕಾರ ಸ್ವೀಕಾರ

ಕ್ವಾರಿ ದುರಂತ: ಬಂಡೆ ಉರುಳಿ ಬಿದ್ದು 3 ಮಂದಿ ಸಾವು, ಹಿಟಾಚಿಯೊಳಗೆ ಸಿಲುಕಿರುವ ಚಾಲಕ

ಫೇಸ್ ಬುಕ್ ಲೈವ್ ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ರಕ್ಷಿಸಿದ ಪೊಲೀಸರು

ಜ್ಞಾನವಾಪಿ ಮಸೀದಿಯೊಳಗೆ 12 ಅಡಿ ಶಿವಲಿಂಗ ಹಾಗೂ ನಂದಿ ಪತ್ತೆ: ನಾಳೆ ಕೋರ್ಟ್ ಗೆ ವರದಿ

ಇತ್ತೀಚಿನ ಸುದ್ದಿ

Exit mobile version